ಮುದಗಲ್: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ, ಬಿ.ಕಾಂ, ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಲಿಂಗಸುಗೂರು ತಾಲ್ಲೂಕು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಸವರಾಜ ಹಂದ್ರಾಳ ಗುರುವಾರ ಉದ್ಘಾಟಿಸಿದರು.

ನಂತರ ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ವಿನಯ, ಸರಳತೆ ಮತ್ತು ಕಠಿಣ ಪರಿಶ್ರಮವನ್ನು ಅಳವಡಿಕೊಂಡು, ಗುರುವಿನ ಮಾರ್ಗದರ್ಶನ ಚಾಚು ತಪ್ಪದೇ ಪಾಲಿಸಿ, ಉನ್ನತ ಜ್ಞಾನ ಪಡೆಯುವಂತರಾಗಬೇಕು. ನೈತಿಕ ಮೌಲ್ಯಗಳ ಜತೆಗೆ ಆರೋಗ್ಯಕರವಾದ ಶಿಕ್ಷಣ ಪಡೆದು ತಮ್ಮ ಬದುಕನ್ನು ರೂಪಿಸಿಕೊಳ್ಳಲು ಮುಂದಾಗಿ, ಸ್ವಯಂ ಉದ್ಯೋಗ ಪಡೆದು ಸ್ವಾಲಂಬಿಯಾಗಿ ಬದುಕಲು ಜೀವನ ರೂಪಿಸಿಕೊಳ್ಳಬೇಕು’ ಎಂದರು.

ಸಹಾಯಕ ಪ್ರಾಧ್ಯಾಪಕ ದೊಡ್ಡ ಬಸಪ್ಪ ಹುಡೇದಗಡ್ಡಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಪ್ರಾಂಶುಪಾಲ ಸಿದ್ದರಾಮ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಉದಯಕುಮಾರ ಕಮ್ಮಾರ, ನಾಗರಾಜ ತಳವಾರ, ಮಲ್ಲಪ್ಪ ಮಾಟೂರು, ಕರಿಯಪ್ಪ ಯಾದವ, ಸಂಜೀವ ಬಾಕಲಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-32-2098744065

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.