ಮುದಗಲ್: ಸಮೀಪದ ಜನತಾಪುರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಡಿ.ಬಡಿಗೇರ್ ಭೇಟಿ ನೀಡಿ, ಬೇಸಿಗೆ ಶಿಬಿರ ವೀಕ್ಷಿಸಿದರು.

ಇಂಡಿಯಾ ಸುಧಾರ್ ಎಜುಕೇಶನ್ ಮತ್ತು ಚಾರಿಟಬಲ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮಕ್ಕಳ ಮನೋಲ್ಲಾಸ 15 ದಿನಗಳ ಉಚಿತ ಬೇಸಿಗೆ ಶಿಬಿರದ 2ನೇ ದಿನದ ಕಾರ್ಯಾಗಾರದಲ್ಲಿ ಉಪ ನಿರ್ದೇಶಕರು ಪಾಲ್ಗೊಂಡು ಮಕ್ಕಳೊಂದಿಗೆ ಚರ್ಚೆ ನಡೆಸಿದರು.

‘ಮಕ್ಕಳು ಚಟುವಟಿಕೆಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ಶಿಬಿರ ಆಯೋಜನೆ ಮಾಡುವುದು ವಿರಳ. ಇಲ್ಲಿನ ಶಿಕ್ಷಕರು ಆಯೋಜನೆ ಮಾಡಿರುವ ವಿಷಯ ತಿಳಿದು, ನೋಡಲು ಬಂದಿರುವೆ. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರ ತರಲು ಇಂತಹ ಶಿಬಿರಗಳು ಸಹಾಯಕ’ ಎಂದರು.

ಶಿಕ್ಷಕರಾದ ಮೌನೇಶ.ಎಂ, ಗೀತಾ, ಜ್ಯೋತಿ ಯರದಿಹಾಳ, ನೀಲಮ್ಮ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-32-251720050

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.