ಮುದಗಲ್: ಪಟ್ಟಣ ಸೇರಿದಂತೆ ಸುತ್ತಲಿನ ಸರ್ಕಾರಿ ಮತ್ತು ಅನುದಾನ ಸಹಿತ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ ಜರುಗಿತು.

ಗುಲಾಬಿ ಹೂಗಳನ್ನು ಮಕ್ಕಳಿಗೆ ನೀಡಿ ಸ್ವಾಗತಿಸಲಾಯಿತು. ಮಕ್ಕಳು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶಿಕ್ಷಣದ ಘೋಷವಾಕ್ಯಗಳನ್ನು ಕೂಗಿದರು. ಸರಸ್ವತಿ ದೇವಿ ಭಾವಚಿತ್ರ ಮೆರವಣಿಗೆ ಮಾಡಿದರು. ಶಾಲೆಯಲ್ಲಿ ತಳಿರುತೋರಣ ಕಟ್ಟಿ ವಿಶೇಷ ಅಲಂಕಾರ ಮಾಡಿದ್ದರು. ಸರಸ್ವತಿ ದೇವಿಗೆ ಪೂಜೆ ಸಲ್ಲಿಸಿದರು. ಸರ್ಕಾರದಿಂದ ನೀಡಿದ ಉಚಿತ ಪಠ್ಯ ಪುಸ್ತಕ ಮತ್ತು ಸಮವಸ್ತ್ರಗಳನ್ನು ಮಕ್ಕಳಿಗೆ ವಿತರಿಸಿದರು. ಮಧ್ಯಾಹ್ನದ ಸಿಹಿ ಬಿಸಿ ಊಟ ಸವಿದರು. ಮಕ್ಕಳು ಸಂತಸದಿಂದ ಕಲಿಕೆಯಲ್ಲಿ ಪಾಲ್ಗೊಂಡರು.

ಸಮೀಪದ ಖೈರವಾಡಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ಜರುಗಿದ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಲಿಂಗಸುಗೂರು ಶಾಸಕ ಮಾನಪ್ಪ ಡಿ. ವಜ್ಜಲ್ ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಮತ್ತು ಶಾಲಾ ಸಮವಸ್ತ್ರವನ್ನು ವಿತರಣೆ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತ ಹೂನೂರು, ಲಿಂಗಸುಗೂರು ಮಂಡಲ ಅಧ್ಯಕ್ಷ ಕೆ. ನಾಗಭೂಷಣ, ಗಿರಿ ಮಲ್ಲನಗೌಡ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-32-194455129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.