ಮುಧೋಳ: ಭಕ್ತಿ ಶಿರೋಮಣಿ ಕರ್ಮಯೋಗಿ ಹೇಮರಡ್ಡಿ ಮಲ್ಲಮ್ಮ ಶೈಕ್ಷಣಿಕ ಮತ್ತು ಧಾರ್ಮಿಕ ಸಂಸ್ಥೆ ವತಿಯಿಂದ ನಗರದ ಮಲ್ಲಮ್ಮ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ವೇಮನ ಅಕಾಡೆಮಿ’ ಶಾಲೆ ಕಟ್ಟಡ ಉದ್ಘಾಟನೆ ಹಾಗೂ ಶಾಲೆ ಪ್ರಾರಂಭೋತ್ಸವ ಸಮಾರಂಭ ಮೇ 24ರಂದು ಬೆಳಿಗ್ಗೆ 10.30ಕ್ಕೆ ಜರುಗಲಿದೆ ಎಂದು ಅಕಾಡೆಮಿ ಅಧ್ಯಕ್ಷ ದಯಾನಂದಗೌಡ ಪಾಟೀಲ ತಿಳಿಸಿದರು.

ನಗರದ ಕಾನಿಪ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಶಾಲೆ ಕಟ್ಟಡ ನಿರ್ಮಿಸಲಾಗಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಎರೆಹೊಸಳ್ಳಿಯ ಮಹಾಯೋಗಿ ವೇಮನ ಗುರುಪೀಠದ ವೇಮನಾನಂದ ಶ್ರೀಗಳು ವಹಿಸಲಿದ್ದಾರೆ. ರಾಜ್ಯದ ಪ್ರವಾಸೋದ್ಯಮ ಹಾಗೂ ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅಬಕಾರಿ ಇಲಾಖೆ ಸಚಿವ ಆರ್.ಬಿ. ತಿಮ್ಮಾಪುರ, ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಎಂ. ಕಾರಜೋಳ ಹಾಗೂ ಬಾಗಲಕೋಟೆ ಲೋಕಸಭೆ ಸದಸ್ಯ ಪಿ.ಸಿ. ಗದ್ದಿಗೌಡರ ಆಗಮಿಸಲಿದ್ದಾರೆ.

ಸಂಸ್ಥೆಯ ನಿರ್ದೇಶಕರಾದ ಕೆ.ಆರ್. ಮಾಚಪ್ಪನವರ, ಶಿವನಗೌಡ ನಾಡಗೌಡ, ಅಶೋಕ ಪಾಟೀಲ, ಸತೀಶ ಮಲಘಾಣ ಹಾಗೂ ಹಣಮಂತಗೌಡ ಬಿರಾದಾರಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-19-1491343366

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.