ಮುಳಬಾಗಿಲು: ಜಿಲ್ಲಾಮಟ್ಟದಲ್ಲಿ ಕೋಲಾರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಮೇ 10ರಂದು ನಡೆಯುವ ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ಪೂರ್ವಭಾವಿ ಸಭೆ ಗುರುವಾರ ನಗರದಲ್ಲಿ ನಡೆಯಿತು.

ಈ ವೇಳೆ ಜಿಲ್ಲಾ ರೆಡ್ಡಿ ಜನಸಂಘದ ಅಧ್ಯಕ್ಷ ಎಸ್.ಕೃಷ್ಣಾರಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಶೈಕ್ಷಣಿಕ ಅಭಿವೃದ್ಧಿಯ ಪ್ರೋತ್ಸಾಹಕ್ಕಾಗಿ ಈ ಬಾರಿ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಶೇ 90ಕ್ಕೂ ಹೆಚ್ಚಿನ ಫಲಿತಾಂಶ ಪಡೆದಿರುವ ಜಿಲ್ಲೆಯ ಸಮುದಾಯದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಕೋಲಾರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆ.ಸಿ.ರೆಡ್ಡಿ ಅವರ ಪುತ್ಥಳಿ ಅನಾವರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಕೆಜಿಎಫ್ನಲ್ಲಿ ಕೆ.ಸಿ.ರೆಡ್ಡಿ ಸ್ಮಾರಕ ಭವನ ನಿರ್ಮಾಣ ಮಾಡಲಾಗುವುದು. ಶಿಕ್ಷಣ ಹಾಗೂ ಸಂಘದ ಚಟುವಟಿಕೆಗಳಿಗಾಗಿ ಭೂಮಿ, ನಿವೇಶನ ಮಂಜೂರು ಮಾಡಿಸಲು ಶ್ರಮಿಸಲಾಗುವುದು ಎಂದರು.

ಹೇಮರಡ್ಡಿ ಮಲ್ಲಮ್ಮ ಕೇವಲ ಒಂದು ಸಮುದಾಯದ ವ್ಯಕ್ತಿಯಲ್ಲ. ಅವರು 15ನೇ ಶತಮಾನದ ಶ್ರೇಷ್ಠ ಶಿವಶರಣೆ. ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಲ್ಲಮ್ಮ ಅವರ ತ್ಯಾಗ ಮತ್ತು ಭಕ್ತಿಯ ಸಂದೇಶವನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

ಹೇಮರೆಡ್ಡಿ ಜನ ಸಂಘದ ರಾಜ್ಯ ನಿರ್ದೇಶಕ ಪ್ರಭಾಕರ್ ರೆಡ್ಡಿ, ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ಕೇಶವರೆಡ್ಡಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಾಂತಮ್ಮ, ಶಾಮಲಮ್ಮ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-18-466918589

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.