ಮುಳಗುಂದ : ‘ವಿದ್ಯಾರ್ಥಿಗಳು ಸತತ ಅಧ್ಯಯನ, ಪರಿಶ್ರಮದಿಂದ ಯಶಸ್ಸು ಸಾಧಿಸಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳಿ’ ಎಂದು ಸಿಪಿಐ ಬಿ.ಜಿ. ಸುಬ್ಬಾಪುರಮಠ ಹೇಳಿದರು.

ಇಲ್ಲಿನ ಆರ್.ಎನ್. ದೇಶಪಾಂಡೆ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ 2025– 26ನೇ ಸಾಲಿನ ಕ್ರೀಡಾ, ಸಾಂಸ್ಕೃತಿಕ, ಎನ್ಎಸ್ಎಸ್, ರೆಡ್ ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳ ಸಮಾರೋಪ ಹಾಗೂ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಓದು ಹರಿಯುವ ನೀರಿನಂತೆ ನಿರಂತರವಾಗಿರಬೇಕು. ಅವಕಾಶಗಳು ಸುಲಭವಾಗಿ ಸಿಗುವುದಿಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು’ ಎಂದು ತಿಳಿಸಿದರು.

‘ಕ್ರೀಡೆ, ಸಾಂಸ್ಕೃತಿಕ, ವಿಜ್ಞಾನ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ, ನಾಯಕತ್ವ ಗುಣ, ಸೃಜನಶೀಲತೆ, ಸಾಮಾಜಿಕ ಕೌಶಲ ಬೆಳೆಯುತ್ತವೆ. ಸೋಲನ್ನು ಗೆಲುವಿನಲ್ಲಿ ರೂಪಾಂತರಿಸಬೇಕು. ಬರೀ ನೌಕರಿಗಾಗಿ ಓದದೆ, ದೇಶಕ್ಕಾಗಿ ಓದಿ ದೇಶದ ಪ್ರಗತಿಗೆ ಸಹಕಾರ ನೀಡಿ. ಅಪರಾಧಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಸಮುದಾಯ ಮುಂದಾಗಬೇಕಿದೆ’ ಎಂದು ಹೇಳಿದರು.

ಎಸ್.ಜೆ.ಜೆ.ಎಂ ಮಹಾವಿದ್ಯಾಲಯದ ಪ್ರಾಚಾರ್ಯ ಎ.ಎಂ. ಅಂಗಡಿ ಮಾತನಾಡಿ, ಇಂದಿನ ತಾಂತ್ರಿಕ ಯುಗದಲ್ಲಿ ಕಾಲಕ್ಕೆ ತಕ್ಕಂತೆ ವಿದ್ಯಾರ್ಥಿಗಳ ಸಾಧನೆ ಇರಬೇಕು. ಆತಂರಿಕ ಭಾವನೆಗಳು, ಸಾಧನೆ ಮಾಡುವ ವಿಚಾರಗಳಂತ ಕನಸ್ಸುಗಳನ್ನ ಕಂಡು ಅವುಗಳ ಸಾಧನೆಗೆ ಸತತ ಪರಿಶ್ರಮ ಪಟ್ಟು ಉತ್ತಮ ಜೀವನ ನಡೆಸಬೇಕು. ಸೌಂದರ್ಯ ಮತ್ತು ಯವ್ವನವನ್ನ ಸೋಲಿಸುವ ಶಕ್ತಿ ಶಿಕ್ಷಣಕ್ಕೆ ಇದೆ. ಜಗತ್ತನ್ನ ಆಳುವುದು ಜ್ಞಾನ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕ್ರೀಯಾಶೀಲರಾಗಿ ಜ್ಞಾನವಂತರಾಗಿ ಎಂದರು.

ಪ್ರಾಚಾರ್ಯ ಆರ್.ಎಂ.ಕಲ್ಲನಗೌಡರ ಮಾತನಾಡಿ, ‘ಪದವಿಗಳಿಗಿಂತ ಕೌಶಲ ಮುಖ್ಯ. ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು, ಕೌಶಲಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಉದ್ಯಮಿ ಸಂತೋಷ ದೇಶಪಾಂಡೆ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎನ್.ಆರ್. ದೇಶಪಾಂಡೆ ಮಾತನಾಡಿದರು. ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಲಾಯಿತು.

ಅಶೋಕ ಸೊನಗೋಜಿ, ಸುಮನ್ ಚವಡಿ, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಇದ್ದರು.

ಶಿವಪ್ಪ ಎಂ. ನಿರೂಪಿಸಿದರು, ಪ್ರಾಧ್ಯಾಪಕಿ ಅನುಪಮಾ ಸ್ವಾಗತಿಸಿದರು, ರಾಜು ಬಿ.ಕೆ. ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-23-1060692013

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.