ಮೂಲ್ಕಿ: ಮಕ್ಕಳಿಗೆ ಸಂಸ್ಕಾರ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬಾಲ್ಯದಲ್ಲೇ ಕಲಿಸುವುದು ಅಗತ್ಯ. ಮಕ್ಕಳ ಶಿಬಿರಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿರಬೇಕು. ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಬೇಕು ಎಂದು ಕಟೀಲು ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.

ಕಿನ್ನಿಗೋಳಿ ಬಳಿಯ ಪುನರೂರು ವಿಶ್ವನಾಥ ದೇವಸ್ಥಾನದಲ್ಲಿ ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಮೂಲ್ಕಿ ಜನವಿಕಾಸ ಸಮಿತಿಯ ಸಹಕಾರದಲ್ಲಿ ಮಕ್ಕಳ ಬೌದ್ಧಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗಾಗಿ ಆಯೋಜಿಸಿರುವ ಉಚಿತ ಬೇಸಿಗೆ ಶಿಬಿರ ಬಾಲವಿಕಾಸ ಶಿಬಿರ - ಉದ್ಘಾಟಿಸಿ ಅವರು ಮಾತನಾಡಿದರು.

ಪುನರೂರು ಪ್ರತಿಷ್ಠಾನದ ಗೌರವ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿ, ಮಕ್ಕಳಲ್ಲಿ ಶಿಸ್ತು, ಭಕ್ತಿ ಹಾಗೂ ಭಾರತೀಯ ಸಂಸ್ಕೃತಿಯ ಅರಿವು ಮೂಡಿಸುವ ಉದ್ದೇಶದಿಂದ ಈ ಶಿಬಿರವನ್ನು 9 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿದೆ ಎಂದರು.

ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ಮೂಲ್ಕಿ ಜೆಸಿಐ ಶಾಂಭವಿಯ ಅಧ್ಯಕ್ಷ ಭಾಸ್ಕರ ಶೆಟ್ಟಿಗಾರ್ ಮಾತನಾಡಿದರು.

ಪುನರೂರು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಜನವಿಕಾಸ ಸಮಿತಿ ಮೂಲ್ಕಿಯ ಅಧ್ಯಕ್ಷ ಸುರೇಶ್ ರಾವ್ ನೀರಳಿಕೆ, ಪದಾಧಿಕಾರಿಗಳಾದ ಗೀತಾ ಶೆಟ್ಟಿ, ಶೋಭಾ ರಾವ್ ಭಾಗವಹಿಸಿದ್ದರು.

ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಸ್ವಾಗತಿಸಿದರು, ಪ್ರಾಣೇಶ್ ಭಟ್ ದೇ೦ದಡ್ಕ ವಂದಿಸಿದರು. ಹಿತಾ ಉಮೇಶ್ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-29-1500004352

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.