ಮುಂಡರಗಿ: ‘ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದ್ದು, ಉತ್ತಮ ಸಮಾಜ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ. ಈ ಕಾರಣದಿಂದ ಶಿಕ್ಷಕರು ಸದಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಎಚ್.ಎಸ್.ಪಾಟೀಲ ಪ್ರತಿಷ್ಠಾನ ಅಧ್ಯಕ್ಷ ಆನಂದಗೌಡ ಪಾಟೀಲ ತಿಳಿಸಿದರು.

ಕಸಾಪ ಘಟಕವು ತಾಲ್ಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನ್ನಡ ಕವಿತೆಗಳ ವಾಚನ-ಗಾಯನ ಕುರಿತ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸೃಜನಶೀಲ ಶಿಕ್ಷಕರನ್ನು ಒಳಗೊಂಡಿರುವ ಶಾಲೆಗಳ ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಸುಲಭವಾಗಿ ಸಾಧನೆ ಮಾಡುತ್ತಾರೆ. ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು ಎಂದು ಸಲಹೆ ನೀಡಿದರು.

ಬಿಇಒ ಗಂಗಾಧರ ಅಣ್ಣಿಗೇರಿ ಮಾತನಾಡಿ, ಮಕ್ಕಳಲ್ಲಿ ಸಹಜವಾಗಿ ಹಲವಾರು ಪ್ರತಿಭೆಗಳು ಅಡಗಿರುತ್ತವೆ. ಅವುಗಳನ್ನು ಗುರುತಿಸಿ ಪ್ರೋತ್ಸಾಹ ನೀಡಿದರೆ ಮಕ್ಕಳು ವಿಶೇಷ ಸಾಧನೆ ಮಾಡಬಲ್ಲರು. ಮಕ್ಕಳು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ.ಗಚ್ಚಣ್ಣವರ ಮಾತನಾಡಿ, ಮಕ್ಕಳ ಸೃಜಲಶೀಲತೆಯನ್ನು ಗುರುತಿಸಲು ಹಾಗೂ ಅದನ್ನು ಉತ್ತೇಜಿಸಲು ಪ್ರತಿವರ್ಷ ಕಸಾಪ ವತಿಯಿಂದ ಮಕ್ಕಳ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.

ಗ್ರಾಮದ ಮುಖಂಡ ಬಸವರಾಜ ತಿಗರಿ ಮಾತನಾಡಿದರು. ಮಂಜುನಾಥ ಮುಧೋಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಬಿರದ ನಿರ್ದೇಶಕ ನಿಂಗು ಸೊಲಗಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ ದಂಡಿನ, ಸಹದೇವಪ್ಪ ಡಂಬಳ, ದ್ವಾರಕೀಶ ರೆಡ್ಡಿ, ಗುರುಬಸವರಾಜ.ಆರ್.ಬಿ., ಜಯಶ್ರೀ ಅಳವಂಡಿ, ಶಿವು ವಾಲಿಕಾರ, ಶಂಕರ ಕೂಕನೂರ, ಬಿ.ಎಚ್.ಹಲವಾಗಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-23-2076833961

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.