ಮುಂಡರಗಿ: ‘ಸಂಘಟನೆಯಲ್ಲಿ ಅಪಾರ ಶಕ್ತಿ ಅಡಗಿದ್ದು, ಪ್ರಾಥಮಿಕ ಶಾಲಾ ಸಂಘದ ತಾಲ್ಲೂಕು ಘಟಕದ ನೂತನ ಸರ್ವ ಪದಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕಿನ ಸಮಸ್ತ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಬಿಇಒ ಗಂಗಾಧರ ಅಣ್ಣಿಗೇರಿ ತಿಳಿಸಿದರು.

ಇಲ್ಲಿಯ ಎಸ್.ಎಂ.ಭೂಮರಡ್ಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸಂಘದ ನೂತನ ಪದಾಧಿಕಾರಿಗಳನ್ನು ಸಾಮಾನ್ಯವಾಗಿ ಶಾಲಾ ಮತ್ತು ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಸನ್ಮಾನಿಸುವುದು ವಾಡಿಕೆ. ಆದರೆ ಈ ಶಾಲೆಯ ಭೂದಾನಿಗಳು ಹಾಗೂ ಅಕ್ಕಪಕ್ಕದವರು ನೂತನ ಪದಾಧಿಕಾರಿಗಳನ್ನು ಸನ್ಮಾನಿಸುತ್ತಿರುವುದು ಶ್ಲಾಘನೀಯ’ ಎಂದು ಹರ್ಷ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಹಳ್ಳಿಕೇರಿ ಮಾತನಾಡಿ, ‘ಶಾಲಾ ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ತಾಲ್ಲೂಕಿನ ಶಿಕ್ಷಕರ ಸಮಸ್ಯೆಗಳನ್ನು ನಿವಾರಿಸಲು ಪ್ರಯತ್ನಿಸಬೇಕು. ಎಲ್ಲ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ಎಸ್.ಎಂ.ಭೂಮರಡ್ಡಿ, ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಎಂ.ಪಿ.ಶೀರನಹಳ್ಳಿ, ಎಸ್.ಡಿ.ಬಸೇಗೌಡರ, ಎಂ.ಎಚ್.ಬಿಚಗತ್ತಿ, ಎಚ್.ಜೆ.ಪವಾರ, ವಿಶ್ವನಾಥ ಉಳ್ಳಾಗಡ್ಡಿ, ಸಂಗಮೇಶ ನಿಡಗುಂದಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜುನಾಥ ಕುಂಬಾರ, ವಿಜಯಕುಮಾರ ಶಿಳ್ಳಿನ, ಅಶೋಕ ಹಂದ್ರಾಳ, ದುರ್ಗಪ್ಪ ರಾಮೇನಹಳ್ಳಿ, ಖಾಜಾಸಾಬ ಕಲಿಕೇರಿ, ಶೇಖರಪ್ಪ ಹಕ್ಕಂಡಿ, ಪೂಜಾ ವಸ್ತ್ರದ, ಎ.ಡಿ.ಬಂಡಿ, ಕೆ.ಎಂ.ಮಾಯಮ್ಮನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-23-1525005887

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.