ಮುಂಡರಗಿ: ‘ತಾಲ್ಲೂಕು ಹಾಲುಮತ ಮಹಾಸಭಾ ಹಾಗೂ ತಾಲ್ಲೂಕು ಕುರುಬರ ಸಂಘದ ವತಿಯಿಂದ ಪಟ್ಟಣದ ಹೆಸರೂರು ರಸ್ತೆಯಲ್ಲಿರುವ ಇಟಗಿ ಭೀಮಾಂಭಿಕಾ ದೇವಸ್ಥಾನದಲ್ಲಿ ಮೇ 17ರಂದು ಬೆಳಿಗ್ಗೆ 11ಗಂಟೆಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ತಾಲ್ಲೂಕು ಹಾಲುಮತ ಮಹಾಸಭಾದ ಅಧ್ಯಕ್ಷ ಸುರೇಶ ಹಲವಾಗಲಿ ಹೇಳಿದರು.

ಪಟ್ಟಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಹಾಲುಮತ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಮಾತ್ರ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿತ್ತು. ಕಳೆದ ವರ್ಷದಿಂದ ತಾಲ್ಲೂಕಿನ ಎಲ್ಲ ಸಮುದಾಯದ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಸನ್ಮಾನಿಸುವ ಕಾರ್ಯ ಕೈಗೊಳ್ಳಲಾಗಿದೆ. ಆ ಮೂಲಕ ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಿದರು.

ತಾಲ್ಲೂಕಿನ ಪ್ರತಿ ಪ್ರೌಢಶಾಲೆಯಿಂದ ಎಸ್.ಎಸ್.ಎಲ್.ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗೆ ಮತ್ತು ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪಿಯು ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ತಾಲ್ಲೂಕು ಹಾಲುಮತ ಮಹಾಸಭಾ ಗೌರವಾಧ್ಯಕ್ಷ ಶಿವನಗೌಡ ಗೌಡರ ಮಾತನಾಡಿದರು. ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಶ್ರೀನಿವಾಸ ಅಬ್ಬಿಗೇರಿ, ಗೋಣೇಶ ಮೇವುಂಡಿ, ಜಗದೀಶ ಸಂಗಟಿ, ಪರುಶುರಾಮ ತಿಗರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-23-1664224245

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.