ಮೈಸೂರು: ‘ಪದವಿಗಳು ಮೊದಲ ಉದ್ಯೋಗ ಪಡೆಯಲು ಸಹಾಯ ಮಾಡಬಹುದು. ಆದರೆ, ದೀರ್ಘಕಾಲದ ಯಶಸ್ಸು ನಮ್ಮೊಳಗಿನ ವ್ಯಕ್ತಿತ್ವ, ಮೌಲ್ಯ ಮತ್ತು ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಜೆಎಸ್ಎಸ್ ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಎ.ಎನ್. ಸಂತೋಷ್ಕುಮಾರ್ ಅಭಿಪ್ರಾಯಪಟ್ಟರು.

ನಗರದ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ಆರಂಭವಾದ ಮೂರು ದಿನಗಳ ‘ವಿದ್ಯುತ್– 2026’ ಸಾಂಸ್ಕೃತಿಕ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.

‘ಸಾಮಾಜಿಕ ಮಾಧ್ಯಮಗಳ ಮಾಹಿತಿಗಳನ್ನು ನೋಡಿ ತಕ್ಷಣ ಯಾವುದೇ ನಿರ್ಧಾರಕ್ಕೆ ಬರಬೇಡಿ. ವಿಮರ್ಶಾತ್ಮಕವಾಗಿ ಯೋಚಿಸಿ ಪೂರ್ಣ ಮಾಹಿತಿ ಪಡೆದ ನಂತರವೇ ಅಭಿಪ್ರಾಯ ರೂಪಿಸಿಕೊಳ್ಳಿ’ ಎಂದು ಸಲಹೆ ನೀಡಿದರು.

‘ಇಂದು ಕಂಪನಿಗಳು ತಾಂತ್ರಿಕ ಜ್ಞಾನಕ್ಕಿಂತ ಹೆಚ್ಚಾಗಿ ವಿದ್ಯಾರ್ಥಿಗಳ ನಡವಳಿಕೆ ಮತ್ತು ಮನೋಭಾವ ಗಮನಿಸುತ್ತವೆ. ಎಐ, ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಿಕ್ ವಾಹನಗಳಂತಹ ಕ್ಷೇತ್ರಗಳು ಭವಿಷ್ಯದಲ್ಲಿ ದೊಡ್ಡ ಅವಕಾಶಗಳನ್ನು ಸೃಷ್ಟಿಸಲಿವೆ. ಎಐ ಕಾರಣದಿಂದ ಉದ್ಯೋಗಗಳು ನಾಶವಾಗುವುದಿಲ್ಲ’ ಎಂದರು.

‘ದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಹೊಂದುತ್ತಿರುವ ಕಾರಣ ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ನಂತಹ ಸಾಂಪ್ರದಾಯಿಕ ಎಂಜಿನಿಯರಿಂಗ್ ವಿಭಾಗಗಳು ಮರುಜೀವ ಪಡೆಯಲಿವೆ. ಕಳೆದ ದಶಕದಲ್ಲಿ ಕೇವಲ ಐಟಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರಿಂದ ಈಗ ಕೋರ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪರಿಣಿತರ ಕೊರತೆಯಾಗಿದೆ’ ಎಂದು ತಿಳಿಸಿದರು.

ವಿದ್ಯಾವರ್ಧಕ ಕಾಲೇಜಿನ ಪ್ರಾಂಶುಪಾಲ ಸದಾಶಿವಗೌಡ, ‘ಸಂಸ್ಕೃತಿಯು ಸಮಾಜದ ಆತ್ಮವಾಗಿದೆ. ಪರಂಪರೆ ಮತ್ತು ಮೌಲ್ಯಗಳನ್ನು ಉಳಿಸಲು ಕಾರ್ಯಕ್ರಮಗಳು ಸಹಕಾರಿ’ ಎಂದರು.

ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪ ಗೌಡ, ಕಾರ್ಯದರ್ಶಿ ಪಿ.ವಿಶ್ವನಾಥ್, ಖಜಾಂಚಿ ಶ್ರೀಶೈಲ ರಾಮಣ್ಣವರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-39-1243987932

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.