ಮೈಸೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸಿದ ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಪರೀಕ್ಷೆಯಲ್ಲಿ ನಗರದ ಅನುಷಾ ಶ್ರೀನಿವಾಸ್ 63ನೇ ರ್ಯಾಂಕ್ ಪಡೆದಿದ್ದಾರೆ.

ಎನ್ಐಇ ಕಾಲೇಜಿನಲ್ಲಿ ಕಂಪ್ಯೂಟರ್ ಎಂಜಿನಿಯರಿಂಗ್ ಪದವಿ ಪಡೆದ ಅನುಷಾ ಅವರು 2014ರಿಂದ ನಾಗರಿಕ ಸೇವಾ ಪರೀಕ್ಷೆಗಳಿಗೆ ತಯಾರಿ ನಡೆಸಿದ್ದರು. 6ನೇ ಪ್ರಯತ್ನದಲ್ಲಿ ಐಎಫ್ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅವರು ನೀರಾವರಿ ಇಲಾಖೆಯ ನಿವೃತ್ತ ಕಾರ್ಯಪಾಲಕ ಎಂಜಿನಿಯರ್ ಕೆ.ಶ್ರೀನಿವಾಸ್– ಮಮತಾ ದಂಪತಿ ಪುತ್ರಿ. ಪತಿ ಸತ್ಯಜಿತ್ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದು, ಸಾಧನೆಗೆ ಪ್ರೋತ್ಸಾಹ ನೀಡಿದ್ದರು.

‘ಹಲವು ಪ್ರಯತ್ನದಲ್ಲಿ ವಿಫಲಗೊಂಡಿದ್ದರೂ, ಅಧ್ಯಯನ ಮತ್ತು ಪರಿಶ್ರಮ ಕೈ ಬಿಡಲಿಲ್ಲ. ತಪ್ಪುಗಳಿಂದ ಪಾಠ ಕಲಿತೆ. ಪ್ರತಿ ಪ್ರಯತ್ನದಲ್ಲೂ ತಿದ್ದಿಕೊಳ್ಳುತ್ತಿದ್ದೆ. ಕಳೆದ ಬಾರಿ 6 ಅಂಕದಿಂದ ರ್ಯಾಂಕಿಂಗ್ ತಪ್ಪಿತ್ತು. ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದೆ. ಈ ಬಾರಿ ಆಯ್ಕೆಯಾಗಿರುವೆ’ ಎಂದು ಅವರ ‘ಪ್ರಜಾವಾಣಿ’ ಜತೆ ಸಂತಸ ಹಂಚಿಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-38-1971467459

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.