ಮೈಸೂರು: ಬನ್ನೂರು ರಸ್ತೆಯಲ್ಲಿರುವ ಎಟಿಎಂಇ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ‘ಆತ್ಮೀಯ–2ಕೆ26’ ಸಂಭ್ರಮದಿಂದ ನಡೆಯಿತು.

ಕನ್ನಡ ಕಿರುತೆರೆ ನಟ ಸೂರಜ್ಸಿಂಗ್, ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಲ್.ಅರುಣ್ಕುಮಾರ್ ಹಾಗೂ ಗಣ್ಯರು ಸಸಿಗೆ ನೀರೆರೆದು ಉದ್ಘಾಟಿಸಿದರು.

‘ಪೌರಕಾರ್ಮಿಕರನ್ನು ಗೌರವಿಸಿ, ಸ್ವಚ್ಛ ನಗರ ನಿರ್ಮಿಸಿ’ ಎಂಬ ಘೋಷವಾಕ್ಯದಡಿ ಈ ಬಾರಿಯ ವಾರ್ಷಿಕೋತ್ಸವ ನಡೆಯಿತು.

ನಗರಪಾಲಿಕೆ ಮತ್ತು ಸುತ್ತಮುತ್ತಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ 10 ಮಂದಿ ಮಹಿಳಾ ಪೌರಕಾರ್ಮಿಕರನ್ನು ಆಯ್ಕೆ ಮಾಡಿ ಅವರಿಗೆ ನಗದು ಪುರಸ್ಕಾರದ ಜೊತೆಗೆ ರೇಷ್ಮೆ ಸೀರೆ, ಬಳೆ, ಅರಿಸಿನ, ಕುಂಕುಮ, ಹಣ್ಣುಗಳನ್ನು ನೀಡಿ ಗೌರವಿಸಲಾಯಿತು.

‘ಇಂತಹ ಸಾಮಾಜಿಕ ಕಾಳಜಿಯ ಕಾರ್ಯಕ್ರಮಗಳು ಮಾದರಿಯಾಗಿವೆ’ ಎಂದು ಸೂರಜ್ ಹೇಳಿದರು.

ವಿವಿದ ಕ್ರೀಡೆಗಳಲ್ಲಿ ವಿಶ್ವವಿದ್ಯಾಲಯ ಪ್ರತಿನಿಧಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಡಿಜೆ ರುಬ್ಙ್ ಸಂಗೀತ ಸಂಜೆ ಪ್ರಸ್ತುತಪಡಿಸಿದರು.

ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಕೆ.ಶಿವಶಂಕರ್, ಖಜಾಂಚಿ ಆರ್. ವೀರೇಶ್, ಆಡಳಿತ ಮಂಡಳಿ ಟ್ರಸ್ಟಿ ಎಚ್.ವೆಂಕಟೇಶ್, ಆಡಳಿತಾಧಿಕಾರಿ ಸಚ್ಚಿದಾನಂದಮೂರ್ತಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಪುಟ್ಟೇಗೌಡ, ಡೀನ್, ಶ್ರಿನಿವಾಸ ಕೆ., ಸ್ಟೂಡೆಂಟ್ ಕೌನ್ಸಿಲ್ ಅಧ್ಯಕ್ಷ ಹರ್ಷ ಹಾಜರಿದ್ದರು.

ಡಾ.ಪುಟ್ಟೇಗೌಡ ವರದಿ ಮಂಡಿಸಿದರು. ಪ್ರಾಧ್ಯಾಪಕ ಸಿ.ಚಂದ್ರಶೇಖರ್ ನಿರೂಪಿಸಿದರು. ಪೂಜಿತಾ ಗಣಪತಿ ಪ್ರಾರ್ಥಿಸಿದರು. ಪ್ರಾಂಶುಪಾಲ ಡಾ.ಎಲ್.ಬಸವರಾಜ್ ಸ್ವಾಗತಿಸಿದರು.

‘ಸುಮಯ ಫಾರ್ ನೀಡಿ’ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ರಕ್ತದಾನ ಶಿಬಿರ, ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಸುಮಯ ಪ್ರಾಪರ್ಟೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-39-1370785067

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.