ಮೈಸೂರು: ‘ವಾಸ್ತವ ಸಂಗತಿಯನ್ನು ಅರಿತು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುವುದು ಸಂವಿಧಾನಕ್ಕೆ ಗೌರವ ಸಲ್ಲಿಸಿದಂತೆ ಆಗುತ್ತದೆ’ ಎಂದು ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್. ಶಿವರಾಜಪ್ಪ ಹೇಳಿದರು.

ಇಲ್ಲಿನ ಖಿಲ್ಲೆ ಮೊಹಲ್ಲಾದ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದಿಂದ ಈಚೆಗೆ ಹಮ್ಮಿಕೊಂಡಿದ್ದ ‘ಪಠ್ಯ ಚಟುವಟಿಕೆಗಳ ಭಿತ್ತಿಪತ್ರ ಪ್ರದರ್ಶನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಚುನಾವಣೆಗಳ ಸಂದರ್ಭದಲ್ಲಿ ಜನರು ಜಾತಿ– ವರ್ಗದ ಆಧಾರದ ಮೇಲೆ ಅಭ್ಯರ್ಥಿಯನ್ನು ಆಯ್ಕೆ ಮಾಡದೆ ಜಾತ್ಯತೀತವಾಗಿ ಚುನಾಯಿಸಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಎಂ. ಶಾರದಾ, ‘ಯಾವುದೇ ಕೆಲಸ ವಾದರೂ ಸರಿಯೇ ಸಂಪೂರ್ಣವಾಗಿ ತೊಡಗಿಸಿಕೊಂಡಾಗ ಅದರಲ್ಲಿ ಪರಿಪೂರ್ಣತೆ ಕಂಡುಬರುತ್ತದೆ’ ಎಂದು ಹೇಳಿದರು.

ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥೆ ಪೂರ್ಣಿಮಾ ಎಚ್.ಎ., ಸಹಾಯಕ ಪ್ರಾಧ್ಯಾಪಕಿ ತಾರಾ ಸಿ.ಎಸ್. ಪಾಲ್ಗೊಂಡಿದ್ದರು. ಕುಸುಮಾ ಸ್ವಾಗತಿಸಿದರು. ಸಂಧ್ಯಾ ವಂದಿಸಿದರು. ಅಶ್ವಿನಿ ಜಿ.ಎಂ. ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-39-273310676

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.