ಮೈಸೂರು: ‘ಪರೀಕ್ಷೆಗಳು ಕೇವಲ ಕಂಠಪಾಠ ಸಾಧನವಾಗದೆ ವಿದ್ಯಾರ್ಥಿಗಳ ನಿಜವಾದ ವಿಷಯದ ಗ್ರಹಿಕೆಯನ್ನು ಮೌಲ್ಯಮಾಪನ ಮಾಡಬೇಕು’ ಎಂದು ಜೆಎಸ್ಎಸ್ ಕಾನೂನು ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಸುರೇಶ ಕೆ.ಎಸ್. ಹೇಳಿದರು.

ಇಲ್ಲಿನ ಸರಸ್ವತಿಪುರಂ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಪರೀಕ್ಷಾ ವಿಭಾಗದಿಂದ ಬುಧವಾರ ನಡೆದ ‘ಪರೀಕ್ಷಾ ಸುಧಾರಣೆ ಗಳು’ ವಿಷಯದ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ‘ಪರೀಕ್ಷೆಗಳು ವಿದ್ಯಾರ್ಥಿಗಳಲ್ಲಿ ಚಿಂತನಾ ಸಾಮರ್ಥ್ಯ ಹೆಚ್ಚಿಸಿದಾಗ ಮಾತ್ರ ಶೈಕ್ಷಣಿಕ ಅಭಿವೃದ್ಧಿ ಸಾಧ್ಯವಾಗುತ್ತದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆಎಸ್ಒಯು ಕುಲಸಚಿವ (ಮೌಲ್ಯಮಾಪನ) ಸಿ.ಎಸ್. ಆನಂದಕುಮಾರ್ ಮಾತನಾಡಿ, ‘ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಜ್ಞಾನದ ಸಾಮರ್ಥ್ಯ ಹೆಚ್ಚಿಸಿದಾಗ ಶೈಕ್ಷಣಿಕ ಬೆಳವಣಿಗೆ ಸಾಧ್ಯವಾಗುತ್ತದೆ’ ಎಂದು ಹೇಳಿದರು.

ಕಾಲೇಜಿನ ಪ್ರಾಚಾರ್ಯ ರೇಚಣ್ಣ ಉಪಸ್ಥಿತರಿದ್ದರು. ಅಧ್ಯಾಪಕಿ ಪುಷ್ಪಾ ಸಿ.ಎಸ್. ಪ್ರಾರ್ಥಿಸಿದರು. ಇಂಗ್ಲಿಷ್ ಭಾಷಾ ವಿಭಾಗದ ಮುಖ್ಯಸ್ಥರಾದ ಪಿ. ವಸುಮತಿ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಆರ್.ಎಸ್. ಕುಮಾರ್ ವಂದಿಸಿದರು. ನಂತರ ನಡೆದ ಗೋಷ್ಠಿಗಳಲ್ಲಿ ಶಿಕ್ಷಣ ಸಲಹೆಗಾರ ವಸಂತ್ ಡಿ.ಭಟ್, ಜೆಎಸ್ಎಸ್ ಕಾನೂನು ಕಾಲೇಜಿನ ಪರೀಕ್ಷಾ ನಿಯಂತ್ರಣಾಧಿಕಾರಿ ಪಿ. ಶಿವಾನಂದ ಭಾರತಿ ವಿಷಯ ಮಂಡಿಸಿದರು. ಪರೀಕ್ಷಾ ನಿಯಂತ್ರಣಾಧಿಕಾರಿ ಎಂ.ಎಂ. ಸ್ವಾಮಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-39-1135974003

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.