ಮೈಸೂರು: ‘ಜಗತ್ತಿನಲ್ಲಿ ಯಾರೂ ಕದಿಯಲಾಗದ ಏಕೈಕ ಆಸ್ತಿ ಎಂದರೆ ಶಿಕ್ಷಣ ಮಾತ್ರ. ಹೆಣ್ಣು ಮಕ್ಕಳು ಉತ್ತಮ ಕಲಿಕೆ ಜೊತೆಗೆ ವೈಚಾರಿಕತೆ ಬೆಳೆಸಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.

ನಗರದ ಮಹಾರಾಣಿ ಮಹಿಳಾ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಬುಧವಾರ ಸಾಂಸ್ಕೃತಿಕ ವೇದಿಕೆಯ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಅಂಬೇಡ್ಕರ್ ನೀಡಿದ ಬೃಹತ್ ಸಂವಿಧಾನವೇ ನಮ್ಮೆಲ್ಲರ ಶಕ್ತಿ. ಅವರು ಮಹಿಳೆಯರ ಮೇಲಿನ ಶೋಷಣೆಯ ವಿರುದ್ಧವೂ ನಿರಂತರವಾಗಿ ಹೋರಾಡಿದವರು. ಮಹಿಳೆಯರ ಶಿಕ್ಷಣ ಮತ್ತು ಹಕ್ಕುಗಳಿಗಾಗಿ ಪ್ರಬಲವಾಗಿ ಧ್ವನಿ ಎತ್ತಿದರು. ಶಿಕ್ಷಣದ ಮೂಲಕ ಅಸಮಾನತೆಯನ್ನು ಹೋಗಲಾಡಿಸಿ, ಸಮಸಮಾಜವನ್ನು ನಿರ್ಮಿಸಬೇಕೆಂಬುದು ಅಂಬೇಡ್ಕರ್ ಆಶಯವಾಗಿತ್ತು’ ಎಂದರು.

‘ಪ್ರಸ್ತಾವನೆಯು ಸಂವಿಧಾನದ ಆತ್ಮ. ಅದರ ಬಗ್ಗೆ ಜನಸಾಮಾನ್ಯರಲ್ಲ, ಶಾಸಕರು, ಮಂತ್ರಿಗಳಿಗೆ ಅರಿವಿರಲಿಲ್ಲ. ಆಲೋಚನೆ ಮಾಡಿ ಪೀಠಿಕೆ ಓದು ಅಭಿಯಾನ ಮಾಡಲಾಯಿತು. ಶಾಲೆಗಳಲ್ಲಿ ನಾಡಗೀತೆ, ರಾಷ್ಟ್ರಗೀತೆಯ ಬಳಿಕ ಪತ್ರಿಕೆಯನ್ನು ಓದಿಸುತ್ತಿದ್ದರು. ಈಗ ಸಂವಿಧಾನ ಪೀಠಿಕೆ ಓದುತ್ತಾರೆ. ಇದರಿಂದ ಮಕ್ಕಳಿಗೆ ಸಂವಿಧಾನದ ಅರಿವು ಬಂದಿದೆ’ ಎಂದರು.

ಜಯದೇವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಕೆ.ಎಸ್. ಸದಾನಂದ, ‘ಕಾಲೇಜಿನ ವಿವಿಧ ವೇದಿಕೆಗಳು ವಿದ್ಯಾರ್ಥಿಗಳ ಪ್ರತಿಭೆ, ಕೌಶಲಗಳ ಪ್ರದರ್ಶನಕ್ಕೆ ಉತ್ತಮ ವೇದಿಕೆ. ಸಾಂಸ್ಕೃತಿಕ ಚಟುವಟಿಕೆಗಳು ಸೃಜನಶೀಲತೆ, ಆತ್ಮವಿಶ್ವಾಸ ಮತ್ತು ಅಭಿವ್ಯಕ್ತಿಯನ್ನು ಹೊರತರುತ್ತವೆ. ಎನ್ಸಿಸಿ, ಎನ್ಎಸ್ಎಸ್ ನಂತಹ ಘಟಕಗಳು ನಮ್ಮಲ್ಲಿ ಸಹಾನುಭೂತಿ, ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಪೋಷಿಸುತ್ತವೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ಹರೀಶ್ ಗೌಡ, ‘ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿಯಿಂದ ಆರಂಭವಾದ ಮಹಾರಾಣಿ ಕಾಲೇಜು ಇಂದು ಸಾವಿರಾರು ಗ್ರಾಮೀಣ ಹೆಣ್ಣುಮಕ್ಕಳ ಉನ್ನತ ಶಿಕ್ಷಣದ ಕನಸು ನನಸಾಗಿಸುತ್ತಿದೆ. ಸರ್ಕಾರವು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದು, 2,900 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಲಾಗಿದೆ’ ಎಂದರು.

ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೊ. ಡಿ.ಎಸ್. ಪ್ರತಿಭಾ, ರಂಗಕರ್ಮಿ ಎಚ್. ಜನಾರ್ಧನ್, ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಶಿವಣ್ಣ, ಐಕ್ಯೂಎಸಿ ಸಂಚಾಲಕ ಎಸ್. ಮುತ್ತುರಾಜ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-39-474208226

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.