ಮೈಸೂರು: ‘ಶಿಕ್ಷಣ ಎಂಬುದು ಕೇವಲ ಬದುಕಿನ ದಾರಿಯಲ್ಲ, ಶೋಷಣೆಯ ಸರಪಳಿಯನ್ನು ಮುರಿಯುವ ಶಕ್ತಿಯುತ ಆಯುಧ’ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ. ಡಿ. ಆನಂದ್ ಹೇಳಿದರು.

ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಗುರುವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿಕ್ಷಣವಿಲ್ಲದ ಜೀವನ ಶೋಷಣೆಯ ಮೂಲ ಎಂದು ಅಂಬೇಡ್ಕರ್ ಪ್ರತಿಪಾದಿಸಿದ್ದರು. ದಲಿತ ಮತ್ತು ಶೋಷಿತ ಸಮುದಾಯಗಳ ಮನಸ್ಸನ್ನು ನಿಯಂತ್ರಿಸುವ ಯತ್ನಗಳಿಗೆ ನಾವು ಅವಕಾಶ ನೀಡಬಾರದು. ಇಂತಹ ಮಾನಸಿಕ ಬಂಧನಗಳಿಂದ ಹೊರಬರಲು ಜ್ಞಾನವೃದ್ಧಿಯೇ ಏಕೈಕ ಮಾರ್ಗ’ ಎಂದರು.

‘ಸರ್ಕಾರ ನೀಡುವ ಶೈಕ್ಷಣಿಕ ಸೌಲಭ್ಯಗಳನ್ನು ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಪ್ರಶ್ನಿಸುವ ಗುಣ ಹಾಗೂ ಕುತೂಹಲವನ್ನು ಬೆಳೆಸಿಕೊಂಡಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ’ ಎಂದರು.

ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ಎಂ.ಕೆ. ಸವಿತಾ, ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಮಹದೇವ ಮೂರ್ತಿ, ಆಡಳಿತಾಧಿಕಾರಿ ಪ್ರೊ. ಎಚ್.ಎಸ್. ಜಯಂತ್ ಹಾಗೂ ಜ್ಞಾನವಾಹಿನಿ ಸಂಚಾಲಕ ಸಿ.ಡಿ. ಪರಶುರಾಮ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-39-306318667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.