ಮೈಸೂರು: ಪದವಿ ಹಾಗೂ ಸ್ನಾತಕೋತ್ತರ ಪದವಿಯ ಕನಸು ಹೊತ್ತು ಇಲ್ಲಿನ ಮೈಸೂರು ವಿಶ್ವವಿದ್ಯಾಲಯಕ್ಕೆ ದಾಖಲಾಗುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಆಶ್ರಯ ಕಲ್ಪಿಸುತ್ತಿರುವ, ಮಾನಸಗಂಗೋತ್ರಿಯ ‘ಗೌತಮ ವಿದ್ಯಾರ್ಥಿನಿಲಯ’ದ ಸಮಗ್ರ ನವೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಮೈಸೂರು ವಿ.ವಿ.ಯ ಕುಲಸಚಿವೆ ಎಂ.ಕೆ. ಸವಿತಾ ಅವರು ಹಾಸ್ಟೆಲ್ನ ಸಮಗ್ರ ನವೀಕರಣದ ಅಗತ್ಯದ ಬಗ್ಗೆ ಸಮಾಜ ಕಲ್ಯಾಣ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಲೋಕೋಪಯೋಗಿ ಹಾಗೂ ಸಮಾಜಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಗಮನಸೆಳೆದಿದ್ದರು.

ಸಚಿವರ ಸೂಚನೆ: ಈ ಕಾರಣದಿಂದ, ‘ಲೋಕೋಪಯೋಗಿ ಇಲಾಖೆಯಿಂದ ₹ 4 ಕೋಟಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ’ ಎಂದು ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಸಚಿವ ಮಹದೇವಪ್ಪ ಅವರ ನಿರ್ದೇಶನದ ಮೇರೆಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ರಾಜೇಶ್, ಚಂದನ ಮತ್ತು ಪ್ರಶಾಂತ್ ಜೊತೆಗೆ ಮೈಸೂರು ವಿ.ವಿ. ಕುಲಸಚಿವರಾದ ಎಂ.ಕೆ. ಸವಿತಾ, ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕ ಗುರುಸಿದ್ದಯ್ಯ, ಹಾಸ್ಟೆಲ್ ಶಿಕ್ಷಕ ಸಲಹೆಗಾರ ಸಿದ್ದರಾಜು ಹಾಸ್ಟೆಲ್ಗೆ ಭೇಟಿ ನೀಡಿ ಅಲ್ಲಿರುವ ಸೌಕರ್ಯವನ್ನು ಪರಿಶೀಲಿಸಿದರು. ಸಮಗ್ರ ನವೀಕರಣ ಕುರಿತು ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.

‘ಆರ್ಥಿಕ ಸಹಾಯಕ್ಕಾಗಿ ವಿವರವಾದ ಯೋಜನಾ ವರದಿಯನ್ನು ಉಸ್ತುವಾರಿ ಸಚಿವರಿಗೆ ಸಲ್ಲಿಸಲಾಗಿತ್ತು. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕಾರಣದಿಂದ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ₹ 4 ಕೋಟಿ ಅಂದಾಜು ಪಟ್ಟಿ ಸಿದ್ಧಪಡಿಸಿ ಸಲ್ಲಿಸಿದ್ದಾರೆ. ಎಸ್ಸಿಎಸ್ಪಿ/ಟಿಎಸ್ಪಿ ಅನುದಾನದಲ್ಲಿ ಕೈಗೊಳ್ಳಲು ಕೋರಲಾಗಿದೆ’ ಎಂದು ಸವಿತಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-39-1471893391

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.