ಜಯಪುರ: ‘ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರೇ ಇಂದು ದೊಡ್ಡಮಟ್ಟದ ನಾಯಕರಾಗಿ, ಸಮಾಜದಲ್ಲಿ ಗಣ್ಯವ್ಯಕ್ತಿಗಳಾಗಿ ಹೊರ ಹೊಮ್ಮಿದ್ದು, ದೊಡ್ಡ ಸಾಧನೆಗಳನ್ನು ಮಾಡಿದ್ದಾರೆ’ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದರು.

ಮೈಸೂರು ತಾಲ್ಲೂಕು ರಟ್ಟನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ತಾಲ್ಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪೋಷಕರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಖಾಸಗಿ ಶಾಲೆಗಳಿಗೆ ಸೇರಿಸುವ ಬದಲು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಸರ್ಕಾರದಿಂದ ಶಾಲೆಗಳಿಗೆ ಮೂಲಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿಗೆ ಆದ್ಯತೆ ನೀಡಿರುವುದರಿಂದ ಹೆಚ್ಚಿನ ಮಕ್ಕಳನ್ನು ಸೇರಿಸಲಾಗುತ್ತಿದೆ’ ಎಂದರು.

‘ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳು, ಕಾಲೇಜುಗಳ ಜಾಗ ಒತ್ತುವರಿಯಾಗದಂತೆ ರಕ್ಷಣೆ ಮಾಡಬೇಕು. ಶಾಲೆಗಳ ಜಾಗ ಒತ್ತುವರಿ ತೆರವುಗೊಳಿಸಿ ಸುತ್ತಲೂ ಕಾಂಪೌಂಡ್ ನಿರ್ಮಾಣ ಮಾಡುವುದರ ಜೊತೆಗೆ ಹಕ್ಕುಪತ್ರ ಕೊಡಿಸುವ ಕೆಲಸ ನಡೆಸಲಾಗುತ್ತಿದೆ. ಇದರಿಂದಾಗಿ ಮುಂದಿನ ಹತ್ತಾರು ವರ್ಷಗಳ ಕಾಲ ಯಾವುದೇ ಸಮಸ್ಯೆಯಾಗುವುದಿಲ್ಲ’ ಎಂದರು.

ಸಾಯಿ ಗಾರ್ಮೆಂಟ್ಸ್ನ ದೇವರಾಜ ಅರಸ್, ಕವಿತಾ, ಡಿಡಿಪಿಐ ಉದಯ್ ಕುಮಾರ್, ಗುಂಗ್ರಾಲ್ ಛತ್ರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಚಿಕ್ಕಣ್ಣ, ಬಿಇಒ ಪ್ರಕಾಶ್, ಪಿಡಿಒ ಶಿವಣ್ಣ, ಮುಖಂಡರಾದ ಯದುವರ, ಅರುಣ್ಕುಮಾರ್ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ರೇವಣ್ಣ, ಮಾದೇವಿ, ರೂಪಾ, ಮಂಜು, ಜಿಲ್ಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಮಾಲೇಗೌಡ, ಉಪಾಧ್ಯಕ್ಷ ರಘು.ಎಸ್, ತಾಲ್ಲೂಕು ಅಧ್ಯಕ್ಷ ಸುಮತಿ, ಉಪಾಧ್ಯಕ್ಷ ಶಿವಪ್ಪ, ಮುರಳಿಧರ್, ರಘು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-38-1480569029

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.