ಹುಣಸೂರು: ಮಕ್ಕಳಲ್ಲಿ ವಿಮರ್ಶಾತ್ಮಕ ಚಿಂತನೆ, ಲಿಂಗಸಮಾನತೆ ಹಾಗೂ ಸಾಮಾಜಿಕ ಮೌಲ್ಯಗಳನ್ನು ತಿಳಿಸುವ ದಿಕ್ಕಿನಲ್ಲಿ ಸಿಎಂಸಿಎ ಸಂಸ್ಥೆ ಸರ್ಕಾರಿ ವಸತಿ ಶಾಲೆಗಳಿಗೆ ಆಧುನಿಕ ಸೌಲಭ್ಯಗಳನ್ನು ನೀಡಿ ಪ್ರೋತ್ಸಾಹಿಸುತ್ತಿದೆ ಎಂದು ಸಿಎಂಸಿಎ ಸಂಸ್ಥೆಯ ಸಂಸ್ಥಾಪಕ ಗೌತಮ್ ಕಿರಂಗದೂರು ಹೇಳಿದರು.

ತಾಲ್ಲೂಕಿನ ಸಬ್ಬನಹಳ್ಳಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಸ್ಮಾರ್ಟ್ ಬೋರ್ಡ್, ಇಂಟರ್ನೆಟ್ ಸೌಲಭ್ಯ, ಯುಪಿಎಸ್ ಕೊಡುಗೆ ನೀಡಿ ಮಾತನಾಡಿದರು.

‘ವಿದ್ಯಾರ್ಥಿಗಳಿಗೆ ಸಂವಿಧಾನ ಮೌಲ್ಯಾಧಾರಿತ ಶಿಕ್ಷಣ ನೀಡಿ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ಬೆಳೆಸುವ ಉದ್ದೇಶದಿಂದ ಸಂಸ್ಥೆ ಶಿಕ್ಷಣದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸುವ ಯೋಜನೆ ಹಮ್ಮಿಕೊಂಡಿದೆ. ಡಿಜಿಟಲೀಕರಣದೊಂದಿಗೆ ಕಲಿಕೆ ಅವಕಾಶ ಕಲ್ಪಿಸುವುದರಿಂದ ಮಕ್ಕಳಲ್ಲಿ ಉತ್ತಮ ಕೌಶಲ ರೂಪುಗೊಳ್ಳಲು ಸಾಧ್ಯವಾಗಲಿದೆ. ಯೋಜನೆ ಅಡಿಯಲ್ಲಿ 100 ವಸತಿ ಶಾಲೆಗಳಿಗೆ ಐಡಿಬಿಐ ಬ್ಯಾಂಕ್ ಸಹಯೋಗದಲ್ಲಿ ಸಿಎಸ್ಆರ್ ಅನುದಾನ ಬಳಸಿಕೊಂಡು ಹಲವು ಕೊಡುಗೆ ನೀಡಿದ್ದು, ಮೈಸೂರು ಜಿಲ್ಲೆಯಲ್ಲಿ ಹುಣಸೂರು ಮತ್ತು ಸಾಲಿಗ್ರಾಮ ತಾಲ್ಲೂಕಿನ ವಸತಿ ಶಾಲೆಗಳಿಗೆ ಹಲವು ಕೊಡುಗೆ ನೀಡಲಾಗಿದೆ’ ಎಂದರು.

ಸುಮನ್ ಮ್ಯಾಥ್ಯೂ ಸಂಸ್ಥೆಯ ಉದ್ದೇಶ ಕುರಿತು ಮಾತನಾಡಿದರು. ಶಾಲೆಯ ಶಿಕ್ಷಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-38-1936017155

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.