ಮೈಸೂರು: ಸೇಂಟ್ ಫಿಲೋಮಿನಾ ಕಾಲೇಜು ಮತ್ತು ಎಸ್.ಆರ್.ಇಂಡಿಯನ್ ಐಎಎಸ್ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಇಂಟಿಗ್ರೇಟೆಡ್ ಪದವಿಯೊಂದಿಗೆ ಯುಪಿಎಸ್ಸಿ ತರಬೇತಿ ಪ್ರಾರಂಭಿಸಲಾಗಿದೆ ಎಂದು ರೆಕ್ಟರ್ ರೆವರೆಂಡ್ ಲೂರ್ದು ಪ್ರಸಾದ್ ಜೋಸೆಫ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ತಮ್ಮ ಕಾಲೇಜು ಶಿಕ್ಷಣದ ಜೊತೆಗೆ ನಾಗರಿಕ ಸೇವೆಗಳ ಪರೀಕ್ಷೆಗೂ ಏಕಕಾಲದಲ್ಲಿ ಸಿದ್ಧತೆ ನಡೆಸಲು ಅನುವು ಮಾಡಿಕೊಡುತ್ತದೆ. ಪದವಿಯ 3 ವರ್ಷಗಳ ಅವಧಿಯಲ್ಲಿ ಶೈಕ್ಷಣಿಕ ಅಧ್ಯಯನದ ಜೊತೆಗೆ ಯುಪಿಎಸ್ಸಿ ಪಠ್ಯಕ್ರಮ ಪೂರ್ಣಗೊಳಿಸಲು ಸಹಾಯವಾಗಲಿದೆ’ ಎಂದು ತಿಳಿಸಿದರು.

ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕ ಪಟೇಲ್ ಎಸ್.ರಮೇಶ್ ಗೌಡ ಮಾತನಾಡಿ, ‘ಐಎಎಸ್, ಐಪಿಎಸ್, ಐಎಫ್ಎಸ್, ಐಆರ್ಎಸ್ ಮತ್ತು ಇತರ ಸ್ಪರ್ಧಾತ್ಮಕ ಸೇವೆಗಳನ್ನು ಒಳಗೊಂಡಂತೆ ಪ್ರತಿಷ್ಠಿತ ನಾಗರಿಕ ಸೇವೆಗಳ ಪರೀಕ್ಷೆಗಳಿಗೆ ಸಮಗ್ರ ತರಬೇತಿಯೊಂದಿಗೆ ಸಂಯೋಜಿತವಾದ ಗುಣಮಟ್ಟದ ಪದವಿ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಒದಗಿಸಲು ಈ ಕಾರ್ಯಕ್ರಮ ವಿನ್ಯಾಸಗೊಳಿಸಲಾಗಿದೆ’ ಎಂದರು.

ಮಾಹಿತಿಗೆ ಮೊ.ಸಂ. 94827 51755, 70266 35347 ಸಂಪರ್ಕಿಸಬಹುದು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-39-1401445086

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.