ಮೈಸೂರು: ‘ಭಾರತ ದೇಶದಲ್ಲಿ ಉತ್ತಮ ಕೌಶಲವುಳ್ಳ ವೈದ್ಯರಿದ್ದು, ಆರೋಗ್ಯ ಪ್ರವಾಸೋದ್ಯಮ ಹಬ್ ಆಗಿ ಬೆಳೆಯುತ್ತಿದೆ’ ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗದ ಮೆಡಿಕಲ್ ಅಸೆಸ್ಮೆಂಟ್ ಮತ್ತು ರೇಟಿಂಗ್ ಬೋರ್ಡ್ ಅಧ್ಯಕ್ಷ ಡಾ.ಎಂ.ಕೆ. ರಮೇಶ್ ತಿಳಿಸಿದರು.

ಇಲ್ಲಿನ ಶಿವರಾತ್ರೀಶ್ವರ ನಗರದಲ್ಲಿರುವ ಜೆಎಸ್ಎಸ್ ವೈದ್ಯಕೀಯ ಮಹಾವಿದ್ಯಾಲಯವು ಮೆಡಿಕಲ್ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಪದವೀಧರ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.

‘ದೇಶದಲ್ಲಿ ಸುಸಜ್ಜಿತ ಆಸ್ಪತ್ರೆ ಹಾಗೂ ಆರೋಗ್ಯ ವ್ಯವಸ್ಥೆಗಳಿವೆ. ಜೊತೆಗೆ ಉತ್ತಮ ಇಂಗ್ಲಿಷ್ ಮಾತನಾಡಬಲ್ಲ ವೈದ್ಯರಿದ್ದಾರೆ. ಪಾಶ್ಚಾತ್ಯ ದೇಶಗಳಿಗಿಂತ ಕಡಿಮೆ ಚಿಕಿತ್ಸಾ ವೆಚ್ಚ ಇರುವುದರಿಂದ, ವಿದೇಶಿಗರು ಭಾರತದಲ್ಲಿ ಚಿಕಿತ್ಸೆ ಪಡೆಯಲು ಬಯಸುತ್ತಾರೆ’ ಎಂದು ಹೇಳಿದರು.

ಸ್ಫೂರ್ತಿ ಪಡೆಯಬೇಕು: ‘ವೈದ್ಯಕೀಯ ಕ್ಷೇತ್ರವು ವ್ಯಾಪಾರೀಕರಣಗೊಂಡ ಕಾಲಘಟ್ಟದಲ್ಲೂ ವೈದ್ಯಕೀಯ ಧರ್ಮ- ನೀತಿ ಮತ್ತು ಸಮಾಜ ಸೇವೆಯ ಮನೋಭಾವ ಇರುವ ವೈದ್ಯರಿದ್ದಾರೆ. ಅವರಿಂದ ಸ್ಫೂರ್ತಿ ಪಡೆಯಬೇಕು. ಹಿಂದಿನ ಕಾಲದಲ್ಲಿ ಚಿಕಿತ್ಸೆ ನೀಡಿದ ವೈದ್ಯರಿಗೆ ಜನರು ತಾವು ಬೆಳೆದ ಬೆಳೆ, ಆಹಾರ ಪದಾರ್ಥ ಕೊಟ್ಟು ಗೌರವಿಸುತ್ತಿದ್ದರು. ಈಗ ಈ ಕ್ಷೇತ್ರವೂ ವೃತ್ತಿಯಾಗಿದ್ದರೂ ನಾವು ನಮ್ಮ ಮೌಲ್ಯ ಕಾಪಾಡಬೇಕು. ಯಶಸ್ಸು ದೊರಕಿದೆ ಎಂದು ವೈದ್ಯಕೀಯ ಧರ್ಮ ಮತ್ತು ನೀತಿ ಮರೆಯಬಾರದು’ ಎಂದು ಸಲಹೆ ನೀಡಿದರು.

‘ಭಾರತವು ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ. 2047ರಲ್ಲಿ ಸ್ವಾತಂತ್ರ್ಯದ 100 ವರ್ಷಗಳನ್ನು ಪೂರ್ಣಗೊಳಿಸುವಾಗ, ಅಭಿವೃದ್ಧಿಶೀಲ ರಾಷ್ಟ್ರವಾಗಲಿದೆ. ಇಂತಹ ವಾತಾವರಣವನ್ನು ವೈದ್ಯಕೀಯ ಕ್ಷೇತ್ರದವರು ಹೇಗೆ ಬಳಸಿಕೊಳ್ಳುತ್ತೀರಿ ಎಂಬುದು ನಿಮ್ಮ ಕೈಯಲ್ಲಿದೆ. ಇದಕ್ಕಾಗಿ ಕೌಶಲವನ್ನು ಹೆಚ್ಚಿಸಿಕೊಳ್ಳಬೇಕು, ಹೊಸ ತಂತ್ರಜ್ಞಾನಗಳನ್ನು ಕಲಿಯಬೇಕು. ಒತ್ತಡವನ್ನು ಸಮರ್ಥವಾಗಿ ನಿಭಾಯಿಸಬೇಕು’ ಎಂದು ಸಲಹೆ ನೀಡಿದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ.ಬೆಟಸೂರಮಠ, ಜೆಎಸ್ಎಸ್- ಎಎಚ್ಇಆರ್ ಕುಲಪತಿ ಡಾ.ಎಚ್.ಬಸವನಗೌಡಪ್ಪ, ಕುಲಸಚಿವ ಡಾ.ಬಿ.ಮಂಜುನಾಥ್, ಪರೀಕ್ಷಾ ನಿಯಂತ್ರಕ ಸುಧೀಂದ್ರ ಭಟ್, ಪ್ರಾಂಶುಪಾಲ ಡಾ.ಡಿ.ನಾರಾಯಣಪ್ಪ, ಉಪ ಪ್ರಾಂಶುಪಾಲರಾದ ಡಾ.ಎಂ.ಎನ್.ಸುಮಾ, ಡಾ.ಮಾಂತಪ್ಪ ,ಜೆಎಸ್ಎಸ್ ಆಸ್ಪತ್ರೆ ನಿರ್ದೇಶಕ ಡಾ.ಸಿ.ಪಿ.ಮಧು, ಆಡಳಿತಾಧಿಕಾರಿ ಎಸ್.ಆರ್ ಸತೀಶ್ಚಂದ್ರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-38-1475644137

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.