ಮೈಸೂರು: ಇಲ್ಲಿನ ಕೃಷಿಕ್ ಸರ್ವೋದಯ ಫೌಂಡೇಶನ್(ಕೆಎಸ್ಎಫ್) ಶಾಖೆಯಿಂದ ಸೋಮವಾರ ಅರ್ಹ ವಿದ್ಯಾರ್ಥಿಗಳಿಗೆ ಎಂಡೋಮೆಂಟ್ ವಿದ್ಯಾರ್ಥಿ ವೇತನ ವಿತರಣೆ ನಡೆಯಿತು.

ವಿಧಾನ ಪರಿಷತ್ತಿನ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಅವರು ಭಾಗವಹಿಸಿ, ‘ಗ್ರಾಮೀಣ ಹಾಗೂ ನಗರ ಪ್ರದೇಶಗಳ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ಕೆಎಸ್ಎಫ್ ಸಂಸ್ಥೆ ಶ್ರಮಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಸಂಸ್ಥೆಯ ಸೇವೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಶಾಖೆಯ ಅಧ್ಯಕ್ಷ ಕೆ.ಎಂ.ಚಂದ್ರೇಗೌಡ ಮಾತನಾಡಿ, ‘ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ವಿದ್ಯಾರ್ಥಿವೇತನ, ಮಾರ್ಗದರ್ಶನ ಸೇರಿದಂತೆ ಅನೇಕ ಶೈಕ್ಷಣಿಕ ಕಾರ್ಯಗಳನ್ನು ಸಂಸ್ಥೆ ನಿರಂತರವಾಗಿ ಮಾಡುತ್ತಿದೆ’ ಎಂದು ವಿವರಿಸಿದರು.

ಶಾಖೆಯ ಕಾರ್ಯದರ್ಶಿ ಎಚ್.ಕಿಶೋರ್ ಚಂದ್ರ, ಜಂಟಿ ಕಾರ್ಯದರ್ಶಿ ವೈ.ಕೆ.ಕೆಂಚೇಗೌಡ, ಖಜಾಂಚಿ ಎಸ್.ವಿ.ಗೌಡಪ್ಪ, ನಿರ್ದೇಶಕರಾದ ಶಂಕರ್ ಬಿ., ಕೆಎಸ್ಎಫ್ ಮೈಸೂರು ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಕೆ.ಚಿದಾನಂದಗೌಡ, ಬಿ.ಕೆ.ಯದುನಾಥ್, ಪ್ರೊ.ಬಿ.ಕೆ.ಜಗದೀಶ್, ಎಂ.ಕೆ.ಜಯರಾಮ್ ಮತ್ತು ಕೆ.ಟಿ.ವೀರಪ್ಪ, ಶಾಖೆಯ ಅಕಾಡೆಮಿಕ್ ಸಂಯೋಜಕಿ ಜ್ಯೋತಿ ಎಂ.ವಿ, ಕೆಎಸ್ಎಫ್ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ಟೆಕ್ನಾಲಜಿಯ ಪ್ರಾಂಶುಪಾಲೆ ನೇತ್ರ ಉತ್ತಯ್ಯ ಕೆ. ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-39-753333791

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.