ಮೈಸೂರು: ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯು ಮೇ 20ರಂದು ಹೊರಡಿಸಿದ್ದ ಕಚೇರಿ ಸೂಚಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ.

‘ಮೇ 21ರಂದು ನಡೆಯುವ ಹಿರಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭಕ್ಕೆ ಪ್ರಥಮ ವರ್ಷದ ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕು. ತಪ್ಪಿದ್ದಲ್ಲಿ ಸಿ–3 ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ’ ಎಂದು ಸಂಸ್ಥೆಯ ನಿರ್ದೇಶಕಿ ಪ್ರೊ.ಎನ್.ಕೆ.ಲೋಲಾಕ್ಷಿ ಸುತ್ತೋಲೆ ಹೊರಡಿಸಿದ್ದರು.

‘ಯುಜಿಸಿ, ವಿಶ್ವವಿದ್ಯಾಲಯದ ನಿಯಮಾವಳಿಯಲ್ಲಿ ಅವಕಾಶವಿದೆಯೇ? ವಿದ್ಯಾರ್ಥಿಗಳನ್ನು ಬ್ಲಾಕ್ಮೇಲ್ ಮಾಡಲಾಗುತ್ತಿದೆ. ಇದು ಸರ್ವಾಧಿಕಾರದ ಧೋರಣೆ’ ಎಂದು ಆಕ್ಷೇಪ ವ್ಯಕ್ತಪಡಿಸಿ ಲೇಖಕ ಹಾರೋಹಳ್ಳಿ ರವೀಂದ್ರ ‘ಫೇಸ್ಬುಕ್’ ಖಾತೆಯಲ್ಲಿ ಬರೆದುಕೊಂಡಿದ್ದು, ಅದಕ್ಕೆ ವಿದ್ಯಾರ್ಥಿಗಳು, ನಾಗರಿಕರು ಬೆಂಬಲಿಸಿದ್ದಾರೆ. ಸಂಸ್ಥೆಯ ನಡೆಯನ್ನು ಪ್ರಶ್ನಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-39-1424056016

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.