ಮೈಸೂರು: ‘ವೃತ್ತಿಪರ ವೈದ್ಯಕೀಯ ಕೋರ್ಸ್ ಪ್ರವೇಶ ಪರೀಕ್ಷೆಯಾದ ‘ನೀಟ್’ ಈಗ ಗೊಂದಲದ ಗೂಡಾಗಿದೆ. ರಾಷ್ಟ್ರೀಯ ಮಟ್ಟದ ಪ್ರಮುಖ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಎಲ್ಲಾ ರಾಜ್ಯಗಳು ಒಟ್ಟಾಗಿ ಧ್ವನಿ ಎತ್ತಬೇಕು’ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ರಾಜ್ಯ ಸರ್ಕಾರವು ವಿಧಾನಮಂಡಲ ವಿಶೇಷ ಅಧಿವೇಶನ ಕರೆದು ಕೇಂದ್ರದ ವೈಫಲ್ಯ ಕುರಿತು ಆಕ್ಷೇಪ ದಾಖಲಿಸಬೇಕು. ಅಲ್ಲದೆ ಈ ಹಿಂದಿನಂತೆಯೇ ರಾಜ್ಯ ವ್ಯಾಪ್ತಿಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ವೈದ್ಯಕೀಯ ಸೇರಿ ಇತರೆ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಅವಕಾಶ ನೀಡುವ ಅಧಿಕಾರವನ್ನು ತನ್ನಲ್ಲೇ ಉಳಿಸಿಕೊಂಡು ನಿರ್ಣಯ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

‘ಮುಖ್ಯಮಂತ್ರಿ, ಡಿಸಿಎಂ ಮತ್ತು ಹಿರಿಯ ಸಚಿವರು, ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯವನ್ನು ರಾಷ್ಟ್ರಪತಿ ಅವರಿಗೆ ಮನವರಿಕೆ ಮಾಡಿಕೊಟ್ಟು, ‘ನೀಟ್’ ಬದಲು ಸಿಇಟಿ ಮೂಲಕ ವೈದ್ಯಕೀಯ ಕೋರ್ಸ್ ಪ್ರವೇಶ ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ಮರಳಿಸುವ ಅನಿವಾರ್ಯ ಈಗ ಸೃಷ್ಟಿಯಾಗಿದೆ’ ಎಂದು ಹೇಳಿದ್ದಾರೆ.

‘ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ತಮಿಳುನಾಡು, ಕೇರಳಂ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಮತ್ತು ಹಕ್ಕು ಕಾಪಾಡಿಕೊಳ್ಳಲು ಮುಂದಾಗಬೇಕು’ ಎಂದು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-39-1142382448

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.