ಮೈಸೂರು: ‘ನೀಟ್ ಪರೀಕ್ಷೆ ರದ್ದಾದ ಆಘಾತದಿಂದ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿ ಕೊಂಡಿ ರುವುದು ಅತ್ಯಂತ ಆಘಾತಕಾರಿ ಮತ್ತು ಖಂಡನೀಯ’ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಹೇಳಿದ್ದಾರೆ.

‘ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಆರೋಪದ ಮೇಲೆ ಪರೀಕ್ಷೆ ರದ್ದುಗೊಳಿಸಿದ ನಂತರ, ಭವಿಷ್ಯದ ಆತಂಕದಿಂದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದರ ನೈತಿಕ ಹೊಣೆ ಹೊತ್ತು ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು’ ಎಂದು ಪತ್ರಿಕಾ ಹೇಳಿಕೆ ಯಲ್ಲಿ ಆಗ್ರಹಿಸಿದ್ದಾರೆ.

‘ಬಿಜೆಪಿ ನಾಯಕರು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ. ತಪ್ಪು ಒಪ್ಪಿಕೊಳ್ಳದೇ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಮೃತ ಮಕ್ಕಳ ಹೊಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹೊರುತ್ತಾರೆಯೇ ಎಂದು ಪ್ರಶ್ನಿಸಿರುವ ಅವರು, ನೈತಿಕತೆಯಿದ್ದರೆ ನೀಟ್ ಬಗ್ಗೆ ದನಿ ಎತ್ತಲಿ’ ಎಂದು ಕಿಡಿಕಾರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-39-1050474625

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.