ಮಡಿಕೇರಿ: ಮೈಸೂರಿನ ರಂಗಾಯಣವು ರಂಗಶಿಕ್ಷಣದಲ್ಲಿ 10 ತಿಂಗಳ ಡಿಪ್ಲೊಮೊ ಕೋರ್ಸ್ಗೆ ಅರ್ಜಿ ಆಹ್ವಾನಿಸಿದೆ.

ಈ ರಂಗತರಬೇತಿ ಕೋರ್ಸ್ಗೆ ಸೇರಬಯಸುವ ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು.

ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು.

ಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷಗಳು ತುಂಬಿರದ ಅಭ್ಯರ್ಥಿಗಳಾಗಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕೋರ್ಸಿನ ಒಂದು ವರ್ಷದ ವ್ಯಾಸಂಗ ಅವಧಿಯಲ್ಲಿ ಊಟ, ವಸತಿ ಹಾಗೂ ಪಠ್ಯ ಸಾಮಗ್ರಿಗಳ ವೆಚ್ಚಗಳನ್ನು ನಿಯಮಾನುಸಾರ ವಿದ್ಯಾರ್ಥಿ ವೇತನ ನೀಡಲಾಗುವುದು.

ಆಸಕ್ತರು http://rangayanamysore.karnataka.gov.in ವೆಬ್ಸೈಟ್ನಿಂದ ಅರ್ಜಿ ಡೌನ್ಲೌಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕದೊಂದಿಗೆ ಜೂನ್ 20 ರ ಸಂಜೆ 5.30 ರೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ: 0821-2512639 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-51-1191523021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.