ಮೈಸೂರು: ಸಂಶೋಧನೆಗಳಿಂದ ಹೊಸ ಉದ್ಯಮ ಹಾಗೂ ಉದ್ಯೋಗ ಅವಕಾಶಗಳ ಸೃಷ್ಟಿ ಸಾಧ್ಯವಿದೆ ಎಂದು ಸಿಎಫ್ಟಿಆರ್ಐ ನಿರ್ದೇಶಕ ಗಿರಿಧರ್ ಪರ್ವತಂ ಅಭಿಪ್ರಾಯಪಟ್ಟರು.

ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದವಿಲಾಸ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಸೋಮವಾರ ಸ್ನಾತಕೋತ್ತರ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ಅಯೋಜಿಸಿದ್ದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

‘ಹೊಸ ಸಂಶೋಧನೆಗಳಿಂದ ಉದ್ಯೋಗಾವಕಾಶಗಳು ಹೆಚ್ಚುವುದರ ಜೊತೆಗೆ ದೇಶದ ಉತ್ಪಾದನಾ ಸಾಮರ್ಥ್ಯವೂ ವೃದ್ಧಿಯಾಗುತ್ತದೆ’ ಎಂದರು.

‘ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳು ಸಂಶೋಧನೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದು. ದೇಶದ ಒಂದು ಮೌಲ್ಯಯುತ ಆಸ್ತಿಯನ್ನಾಗಿ ರೂಪಿಸಲು ಸಾಧ್ಯವಿದೆ’ ಎಂದು ಹೇಳಿದರು.

‘ಬೆಳವಣಿಗೆಯ ಹೆಸರಿನಲ್ಲಿ ರಾಸಾಯನಿಕ ಮತ್ತು ಔಷಧಗಳನ್ನು ಹೆಚ್ಚಾಗಿ ಬಳಸಿ ಪರಿಸರವನ್ನು ಹಾಳು ಮಾಡುವುದಲ್ಲದೆ, ಅದರಿಂದ ಬೆಳೆಯುವ ತರಕಾರಿ, ಧಾನ್ಯಗಳನ್ನು ತಿಂದು ನಾವು ಕೂಡ ರೋಗ ಪೀಡಿತರಾಗುತ್ತಿದ್ದೇವೆ. ನಮ್ಮ ಪರಿಸರವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವಿದೆ’ ಎಂದರು.

‘ಜೀವ ವೈವಿಧ್ಯತೆಯ ಜತೆಗೆ ಪರಿಸರದ ಸಂಪನ್ಮೂಲಗಳು ನಾಶವಾಗುತ್ತಿವೆ. ಅವುಗಳನ್ನು ಪುನರ್ ಬಳಕೆ ಮಾಡಬಹುದಾದ ಸಂಪನ್ಮೂಲಗಳನ್ನು ಹೆಚ್ಚು ಬಳಸುವ ಅಗತ್ಯವಿದೆ’ ಎಂದು ತಿಳಿಸಿದರು.

ಶಾರದವಿಲಾಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎಂ. ಸುಬ್ರಾಯ, ಆಡಳಿತ ಮಂಡಳಿ ಸದಸ್ಯ ಎಸ್.ಎಲ್. ರಾಮಚಂದ್ರ, ಪ್ರಾಂಶುಪಾಲೆ ಎಂ. ದೇವಿಕಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-39-1500929191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.