ಮೈಸೂರು: ತೀವ್ರ ವಿರೋಧದ ನಡುವೆಯೂ ಶಾಲೆಗಳ ವಿಲೀನ ಮುಂದುವರಿಸಿರುವ ರಾಜ್ಯ ಸರ್ಕಾರದ ಹಟಮಾರಿ ಹಾಗೂ ಸರ್ವಾಧಿಕಾರಿ ಧೋರಣೆ ಖಂಡಿಸಿ ಎಐಡಿಎಸ್ಒ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಸದಸ್ಯರು ಶುಕ್ರವಾರ ಪ್ರತಿಭಟಿಸಿದರು.

ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ ಮಾತನಾಡಿ, ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ರಾಜ್ಯ ಸರ್ಕಾರ, ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುತ್ತಿದೆ. ಇದೀಗ ಪಿಎಂಶ್ರೀ ಶಾಲೆಗಳಿಗೆ ಕೂಡ ಸುತ್ತಲಿನ ಶಾಲೆಗಳನ್ನು ವಿಲೀನಗೊಳಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಸರ್ಕಾರ ಪಿಎಂಶ್ರೀ ಯೋಜನೆಯ ಹೆಸರಿನಲ್ಲಿ ರಾಜ್ಯದಾದ್ಯಂತ 317 ಶಾಲೆಗಳನ್ನು ವಿಲೀನ ಮಾಡಿಸಲು ಆದೇಶ ಹೊರಡಿಸಿದೆ. ಅಲ್ಲದೇ ಪಿಯು ಕಾಲೇಜುಗಳನ್ನು ಕೂಡ ವಿಲೀನಗೊಳಿಸಲಾಗುತ್ತಿದೆ’ ಎಂದು ಕಿಡಿಕಾರಿದರು.

‘ಶಿಕ್ಷಣಕ್ಕೆ 8 ಗ್ಯಾರಂಟಿಗಳನ್ನು ನೀಡಿ ದೇಶದಲ್ಲೇ ಮಾದರಿ ಶಾಲಾ ವ್ಯವಸ್ಥೆ ನಿರ್ಮಿಸುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ವಾಸ್ತವದಲ್ಲಿ ಈ ಗ್ಯಾರಂಟಿಗಳು ಮೋಸದಿಂದ ಕೂಡಿವೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನಲ್ಲಿ ಅನೇಕ ಹಳ್ಳಿಗಳ ಶಾಲೆಗಳನ್ನು ವಿಲೀನಗೊಳಿಸುವ ಅಧಿಕೃತ ಪಟ್ಟಿ ಈಗಾಗಲೇ ಹೊರಬಿದ್ದಿದ್ದು, ಗ್ರಾಮಸ್ಥರಿಂದ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಹಳ್ಳಕಟ್ಟೆ ಶಾಲೆಯ 58 ಮಕ್ಕಳನ್ನು, ಎಂವಿ ಹಟ್ಟಿಯ 28 ಮಕ್ಕಳನ್ನು, ಹಿರೇ ಸಾದರಹಳ್ಳಿಯ 34 ಮಕ್ಕಳನ್ನು ಹೊಳಲ್ಕೆರೆಯ 40 ಮಕ್ಕಳು... ಹೀಗೆ 15 ಹಳ್ಳಿಗಳಲ್ಲಿ ಓದುತ್ತಿರುವ 305 ಮಕ್ಕಳನ್ನು ಡಿ.ಎಂ ಕುರ್ಕೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಸೇರಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ. ಈ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಪ್ರತಿಭಟನೆ ತೀವ್ರಗೊಳಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-51-1356292339

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.