ಮೈಸೂರು: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಮೇ 4ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ (https://swdservices. karnataka.gov.in/Education Prestigious)ದಲ್ಲಿ ನೋಂದಾಯಿಸಬೇಕು. ನಂತರ ಅರ್ಜಿಯೊಂದಿಗೆ ದಾಖಲಾತಿಗಳನ್ನು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಮೇ 5ರ ಸಂಜೆ 5.30ರೊಳಗೆ ಸಲ್ಲಿಸಬೇಕು.

ಪೌರಕಾರ್ಮಿಕರು, ಸಫಾಯಿ ಕರ್ಮಚಾರಿಗಳು, ಸ್ಮಶಾನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರು, ದೇವದಾಸಿಯರು, ಅಂಗವೈಕಲ್ಯ ಹೊಂದಿರುವವರು ಮಕ್ಕಳು, ಕೋವಿಡ್-19 ಮೊದಲಾದವುಗಳಿಂದ ತಂದೆ-ತಾಯಿ ಕಳೆದುಕೊಂಡವರು, ಮಾಜಿ ಸೈನಿಕರ ಮಕ್ಕಳು, ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಮಕ್ಕಳು, ಕೃಷಿ ಕಾರ್ಮಿಕರ ಮಕ್ಕಳು, ಸಾಲದಿಂದ ಆತ್ಮಹತ್ಯೆಗೆ ಮಾಡಿಕೊಂಡವರ ಮಕ್ಕಳು ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-39-1431607694

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.