ಮೈಸೂರು: ‘ಬೆಂಗಳೂರಿನ ಬಸವೇಶ್ವರ ನಗರದಲ್ಲಿನ ಕನಕಶ್ರೀ ಚಾರಿಟಬಲ್ ಟ್ರಸ್ಟ್ ವತಿಯಿಂದ 2025–26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 95 ಮತ್ತು ಅದಕ್ಕಿಂತ ಹೆಚ್ಚಿನ ಅಂಕ, ಪಿಯುಸಿ ಪರೀಕ್ಷೆಯಲ್ಲಿ ಶೇ 90 ಅಥವಾ ಅದಕ್ಕಿಂತಲೂ ಹೆಚ್ಚಿನ ಅಂಕ ಪಡೆದ ಹಾಲುಮತ, ಕಾಡುಕುರುಬ, ಜೇನುಕುರುಬ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ’ ಎಂದು ಟ್ರಸ್ಟ್ ಅಧ್ಯಕ್ಷ ಟಿ.ಬಿ. ಬಳಗಾವಿ ತಿಳಿಸಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮೈಸೂರು ವಿಭಾಗದ ಜಿಲ್ಲೆಗಳಾದ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಿದ್ಯಾಭ್ಯಾಸ ಮಾಡಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು. ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಜೂ.14ರಂದು ನಗರದ ಕನಕ ಸಮುದಾಯಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ₹ 5 ಸಾವಿರ ಪ್ರೋತ್ಸಾಹಧನ ಮತ್ತು ಪ್ರಶಂಸನಾ ಪತ್ರ ನೀಡಿ ಪುರಸ್ಕರಿಸಲಾಗುವುದು’ ಎಂದರು.

ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿಯ ದೃಢೀಕೃತ ನಕಲು ಪ್ರತಿ, ವರ್ಗಾವಣೆ ಪ್ರಮಾಣ ಪತ್ರ ಅಥವಾ ಜಾತಿ ಪ್ರಮಾಣ ಪತ್ರದ ದೃಢೀಕೃತ ನಕಲು ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಭಾವಚಿತ್ರದೊಂದಿಗೆ ವಿದ್ಯಾರ್ಥಿಯ ಸಂಪೂರ್ಣ ವಿವರವನ್ನೊಳಗೊಂಡ ಅರ್ಜಿಯನ್ನು ಜೂನ್ 8 ರ ಒಳಗೆ ಟಿ.ಬಿ. ಬಳಗಾವಿ, ಅಧ್ಯಕ್ಷರು, ಕನಕಶ್ರೀ ಚಾರಿಟಬಲ್ ಟ್ರಸ್ಟ್, ಕೇರ್ ಆಫ್ ಕನಕಶ್ರೀ ಗೃಹ ನಿರ್ಮಾಣ ಸಹಕಾರ ಸಂಘ, ನಂ. 20/31, 6ನೇ ಮುಖ್ಯ ರಸ್ತೆ, 80 ಅಡಿ ರಸ್ತೆ, ಕೆಎಚ್ಬಿ ಕಾಲೊನಿ, 1 ನೇ ಹಂತ ಬಸವೇಶ್ವರ ನಗರ, ಬೆಂಗಳೂರು 560079ಕ್ಕೆ ಸಲ್ಲಿಸಬಹುದು. ಮಾಹಿತಿಗೆ ದೂ.ಸಂ 080 23585684 ಅಥವಾ 9845101696 ಸಂಪರ್ಕಿಸಬಹುದು ಎಂದು ಹೇಳಿದರು.

ಟ್ರಸ್ಟ್ ಗೌರವ ಅಧ್ಯಕ್ಷ ಎಚ್.ಎಂ. ರೇವಣ್ಣ, ಕಾರ್ಯದರ್ಶಿ ಪಿ.ಎನ್. ಕೃಷ್ಣಮೂರ್ತಿ, ಖಜಾಂಚಿ ಎಂ. ಪ್ರಕಾಶ್, ಟ್ರಸ್ಟಿ ವಿ. ಮುನಿರಾಜಪ್ಪ, ಕುರುಬ ಸಮುದಾಯ ಮುಖಂಡ ಸುಬ್ರಹ್ಮಣ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-36-1499006000

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.