ತಿ.ನರಸೀಪುರ: ‘ವಿದ್ಯಾರ್ಥಿಗಳು ಸೇವಾ ಮನೋಭಾವವನ್ನೂ ಬೆಳೆಸಿಕೊಳ್ಳಬೇಕು’ ಎಂದು ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯ ಬೋಧಕ ಎಂ.ಕ್ರಾಂತಿರಾಜ್ ಒಡೆಯರ್ ಹೇಳಿದರು

ತಾಲ್ಲೂಕಿನ ತಲಕಾಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025–26ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಮತ್ತು ವಿವಿಧ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಶೈಕ್ಷಣಿಕ ಸಾಧನೆಗೆ ಹೆಚ್ಚು ಒತ್ತು ನೀಡುತ್ತಲೇ ಸಮಾಜಪರ ಆಲೋಚನೆಯನ್ನು ಹೊಂದಲು ಪ್ರಯತ್ನಿಸಬೇಕು’ ಎಂದರು.

ತಲಕಾಡು ನಾಡಕಚೇರಿಯ ಉಪ ತಹಶೀಲ್ದಾರ್ ಮಾತನಾಡಿ, ‘ಮಕ್ಕಳು ತಮ್ಮ ಭವಿಷ್ಯ ರೂಪಿಸಲು ಶ್ರಮಿಸುವ ಪೋಷಕರನ್ನು ಗೌರವಿಸಬೇಕು, ಚೆನ್ನಾಗಿ ನೋಡಿಕೊಳ್ಳಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎನ್.ವಸಂತರಾಜು, ‘ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ರೂಡಿಸಿಕೊಳ್ಳಬೇಕು. ಸರಿ ತಪ್ಪುಗಳ ವಿಮರ್ಶಿಸಿ, ಪ್ರತಿಕ್ರಿಯಿಸುವ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪಿ.ಶೇಖರ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಾಗಣ್ಣ ಅವರು ಕಾಲೇಜಿನ ವಿವಿಧ ಚಟುವಟಿಕೆಗಳ ವಾರ್ಷಿಕ ವರದಿ ಪ್ರಸ್ತುತಪಡಿಸಿದರು.

ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಎಸ್.ರವಿಕುಮಾರ್, ಬೋಧಕರಾದ ಚಲುವರಾಜು ಆರ್, ಡಿ.ಹರೀಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-38-1095414871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.