ಮೈಸೂರು: ‘ವಿದ್ಯಾರ್ಥಿಗಳು ಪಠ್ಯ ಅಭ್ಯಾಸದೊಂದಿಗೆ ಲೋಕಜ್ಞಾನ ಗಳಿಸಬೇಕು. ಯಾವ ವಿದ್ಯಾರ್ಥಿ ಸಾಮಾನ್ಯ ಜ್ಞಾನವನ್ನು ಸಂಪಾದಿಸುವುದಿಲ್ಲವೋ ಆತ ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದು ಕಷ್ಟ’ ಎಂದು ಶಾಸಕ ಜಿ.ಡಿ. ಹರೀಶ್ ಗೌಡ ಹೇಳಿದರು.

ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಶನಿವಾರ ನಡೆದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಪತ್ರಕರ್ತರಿಗೆ ಅಭಿನಂದನೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪೋಷಕರು, ಶಿಕ್ಷಕರು ಮಾರ್ಗದರ್ಶನ ನೀಡಬಹುದು. ಆದರೆ, ನಿಮ್ಮ ಭವಿಷ್ಯವನ್ನು ನೀವೇ ಕಟ್ಟಿಕೊಳ್ಳಬೇಕು. ನಿಮಗೆ ಆಸಕ್ತಿ ಇರುವ ಕ್ಷೇತ್ರದಲ್ಲಿ ಮುಂದುವರೆಯಿರಿ. ನೀವು ವಿದ್ಯಾವಂತರಾಗದಿದ್ದರೆ, ನಿಮ್ಮಲ್ಲಿ ಸಾಮಾನ್ಯ ಜ್ಞಾನ ಇಲ್ಲವಾದರೆ ಈ ಸಮಾಜದಲ್ಲಿ ಯಶಸ್ವಿಯಾಗಿ ಬದುಕಲು ಸಾದ್ಯವಾಗಲ್ಲ’ ಎಂದರು.

‘ಪತ್ರಕರ್ತರು ಸುದ್ದಿಮನೆಗೆ ಸೀಮಿತವಾಗದೆ ಮಕ್ಕಳ ಭವಿಷ್ಯದ ಕಡೆಗೂ ಗಮನ ನೀಡಬೇಕು’ ಎಂದು ಕಿವಿಮಾತು ಹೇಳಿದರು.

‘ಪ್ರಜಾವಾಣಿ’ ಮೈಸೂರು ಬ್ಯುರೊ ಮುಖ್ಯಸ್ಥ ಕೆ. ನರಸಿಂಹಮೂರ್ತಿ, ಹಿರಿಯ ವರದಿಗಾರ ಕುಂದೂರು ಉಮೇಶ ಭಟ್ಟ, ಪತ್ರಕರ್ತರಾದ ಆರ್.ಕೃಷ್ಣಕುಮಾರ್, ಐತಿಚಂಡ ರಮೇಶ್ ಉತ್ತಪ್ಪ, ಎ.ಸಿ. ಪ್ರಭಾಕರ್, ಎಚ್.ಕೆ. ನಾಗೇಶ್, ಕೆ.ಟಿ. ಮಂಜುನಾಥ್, ಶಿವಕುಮಾರ್ ವಿ. ರಾವ್ ಅವರನ್ನು ಅಭಿನಂದಿಸಲಾಯಿತು.

ನಂತರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು, ಜಿಎಸ್ಎಸ್ ಸಮೂಹ ಸಂಸ್ಥೆಯ ಮುಖ್ಯಸ್ಥ ಶ್ರೀಹರಿ, ಸಂಘದ ಅಧ್ಯಕ್ಷ ಕೆ. ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-39-620541517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.