ಮೈಸೂರು: ‘ವಿದ್ಯಾರ್ಥಿನಿಯರು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು’ ಎಂದು ಧ್ವನಿ ಫೌಂಡೇಷನ್ ಸಂಸ್ಥಾಪಕಿ ಶ್ವೇತಾ ಮಡಪ್ಪಾಡಿ ತಿಳಿಸಿದರು.

ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಯೂತ್ ರೆಡ್ಕ್ರಾಸ್ ಹಾಗೂ ಮಹಿಳಾ ಸಬಲೀಕರಣ ಕೋಶದಿಂದ ಈಚೆಗೆ ಆಯೋಜಿಸಿದ್ದ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

‘ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಸಮಾಜದಲ್ಲಿ ಉತ್ತಮ ಸ್ಥಾನಮಾನ ದೊರೆಯುತ್ತದೆ. ಆಕೆಯ ಮೇಲಿನ ಶೋಷಣೆಯೂ ಕಡಿಮೆಯಾಗುತ್ತದೆ’ ಎಂದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಿರ್ವಹಣಾ ಅಧ್ಯಯನ ವಿಭಾಗದ ಸಂಯೋಜಕಿ ಹೇಮಾ ಪಾಟೀಲ್, ‘ಸಾಮಾಜಿಕ ಮಾಧ್ಯಮ ಮತ್ತು ತಂತ್ರಜ್ಞಾನದ ಬಳಕೆ ಹೆಚ್ಚಾದಂತೆ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣ ಹೆಚ್ಚಳವಾಗುತ್ತಿವೆ.ಹೆಣ್ಣುಮಕ್ಕಳು ಕಾನೂನು ಅರಿವು ಪಡೆದುಕೊಂಡರೆ, ಅವನ್ನು ಕಾನೂನಾತ್ಮಕವಾಗಿ ಎದುರಿಸಬಹುದು’ ಎಂದರು.

ಲೆಕ್ಕ ಪರಿಶೋಧಕಿ ಜಿ.ಎ. ಅಕ್ಷರಿ, ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಮೊರಬದ ಮಲ್ಲಿಕಾರ್ಜುನ, ಕಾಲೇಜಿನ ಪ್ರಾಂಶುಪಾಲ ರೇಚಣ್ಣ, ಯೂತ್ ರೆಡ್ಕ್ರಾಸ್ ಸಂಚಾಲಕಿ ಪಿ. ವಸುಮತಿ ಮತ್ತು ಮಹಿಳಾ ಸಬಲೀಕರಣ ಕೋಶದ ಸಂಚಾಲಕಿ ಎನ್. ನಾಗಲಾಂಬಿಕೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-39-924638289

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.