ಮೈಸೂರು: ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಭಕ್ತಿಯಿಂದ ಗುರಿಯಿಟ್ಟುಕೊಂಡು ಸಾಧನೆ ಮಾಡುವ ಮುಖಾಂತರ ಜೀವನದಲ್ಲಿ ಯಶಸ್ಸನ್ನು ಕಾಣಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ರೇಖಾ ತಿಳಿಸಿದರು.

ಕುವೆಂಪುನಗರದಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯೆಯ ಜೊತೆಗೆ ಸತತ ಪರಿಶ್ರಮ ಮತ್ತು ಆತ್ಮವಿಶ್ವಾಸವಿದ್ದರೆ ಯಶಸ್ಸು ಸಾಧ್ಯ‘ ಎಂದು ಅವರು ಕಿವಿಮಾತು ಹೇಳಿದರು.

‘ಬಿಸಿಎಂ ಹಾಸ್ಟೆಲ್ನಲ್ಲಿ ಓದಿದ ರಾಘವೇಂದ್ರ ಇಂದು ಇಲ್ಲೇ ಅಧಿಕಾರಿಯಾಗಿದ್ದಾರೆ. ಮಂಡ್ಯದಲ್ಲಿ ಕುಮಾರ್ ಅವರು ಜಿಲ್ಲಾಧಿಕಾರಿಯಾಗಿದ್ದಾರೆ. ನೀವು ಸಹ ಅವರನ್ನು ಮಾದರಿಯಾಗಿಟ್ಟುಕೊಂಡು ಸಾಧನೆ ಮಾಡಬೇಕು’ ಎಂದರು.

ನಿಲಯ ಪಾಲಕ ಜಗದೀಶ್ ಕೋರಿ, ವಿಸ್ತರಣಾಧಿಕಾರಿ ಸುಜೇಂದ್ರಕುಮಾರ್, ನಿಲಯ ಪಾಲಕರಾದ ಮಹಾಲಕ್ಷ್ಮಿ, ನಾಗರತ್ನ, ನಾಗರಾಜ್, ರಮ್ಯಾ, ಅನುಪಮಾ, ರೇಖಾ, ಭಾಗ್ಯಲಕ್ಷ್ಮಿ, ಪರಮೇಶ್ವರಪ್ಪ, ಧನಂಜಯ, ತೇಜಸ್ವಿನಿ, ಅರ್ಪಿತಾ ಹಾಗೂ ಲೋಕೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-39-823782662

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.