ತಿ. ನರಸೀಪುರ: ಸರ್ಕಾರಿ ಶಾಲೆಯ ಮಕ್ಕಳು ಸಾಂಪ್ರದಾಯಿಕ ಶಿಕ್ಷಣಕ್ಕೆ ಸೀಮಿತವಾಗದೆ, ಜಾಗತಿಕ ಮಟ್ಟದ ತಂತ್ರಜ್ಞಾನದ ಜ್ಞಾನವನ್ನು ಪಡೆಯಬೇಕು’ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಿ. ಉದಯ್ಕುಮಾರ್ ಸಲಹೆ ನೀಡಿದರು.

ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುಂಬಲ ಗ್ರಾಮದ ಪಿಎಂಶ್ರೀ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ನೂತನ ವೆಬ್ಸೈಟ್ ಹಾಗೂ ಸುಸಜ್ಜಿತ ಕ್ರೀಡಾ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ತುಂಬಲ ಸರ್ಕಾರಿ ಶಾಲೆಯಲ್ಲಿ ಎಐ, ರೋಬೋಟಿಕ್ಸ್ ಹಾಗೂ ಆಸ್ಟ್ರೋ ಸೈನ್ಸ್ ತರಗತಿಗಳನ್ನು ಆರಂಭಿಸಿರುವುದು ಹೆಮ್ಮೆಯ ಸಂಗತಿ. ಗ್ರಾಮೀಣ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಆಧುನಿಕ ತಂತ್ರಜ್ಞಾನದ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದೆ’ ಎಂದು ತಿಳಿಸಿದರು.

‘ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಸುಸಜ್ಜಿತಗೊಳಿಸಲಾಗುತ್ತಿದೆ. ಶಾಲೆಯು ಪಾರದರ್ಶಕತೆ ಮತ್ತು ಡಿಜಿಟಲ್ ಬೆಳವಣಿಗೆಗೆ ಸಾಕ್ಷಿಯಾಗಿದ್ದು, ವಿದ್ಯಾರ್ಥಿಗಳ ದೈಹಿಕ ವಿಕಾಸಕ್ಕೆ ಕ್ರೀಡೆ ಅತಿ ಮುಖ್ಯವಾಗಿದೆ. ಕ್ರೀಡಾ ಕೊಠಡಿಯನ್ನು ಮಕ್ಕಳು ಬಳಸಿಕೊಳ್ಳಬೇಕು. ಶಿಕ್ಷಣ ಇಲಾಖೆಯು ಈ ಯೋಜನೆಗಳಿಗೆ ಸದಾ ಬೆಂಬಲ ನೀಡಲಿದ್ದು, ಶಿಕ್ಷಕರು, ಪೋಷಕರು ಮತ್ತು ಎಸ್ಡಿಎಂಸಿ ಮಂಡಳಿ ಒಟ್ಟಾಗಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಸಲಹೆ ಮಾಡಿದರು.

ಮೈಸೂರು ಜಿಲ್ಲಾ ಶಿಕ್ಷಣಾಧಿಕಾರಿ ನಿರೂಪ ಬೆಸ್ಲಿ, ಜಿಲ್ಲಾ ಉಪ ಯೋಜನಾ ಸಮನ್ವಯ ಅಧಿಕಾರಿ ಜಿ. ಶೋಭಾ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ತುಂಬಲ ಅಂದಾನಿ, ಸಮಾಜ ಸೇವಕ ಲಯನ್ ಕುಮಾರ್, 'ಟ್ರೀವಿಂಗ್ ಮೈಂಡ್' ಸಂಸ್ಥೆಯ ಕೋ-ಆರ್ಡಿನೇಟರ್ ನಿಖಿಲ್ ಹಾಗೂ ಸಿ.ಆರ್.ಪಿ ಶ್ರೀಧರ್, ಎಸ್ಡಿಎಂಸಿ ಅಧ್ಯಕ್ಷ ಶಿವಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಿದ್ದರಾಜು, ಎಸ್ಡಿಎಂಸಿ ಸದಸ್ಯರಾದ ನಂದೀಶ ಸಾಗರ, ಪಾಪಣ್ಣ, ಇಂದ್ರಮ್ಮ, ಸೌಮ್ಯ ನಾಗರಾಜು, ಎಸ್ಡಿಎಂಸಿ ಮಾಜಿ ಅಧ್ಯಕ್ಷ ಚುಂಚೇಗೌಡ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-38-1759789989

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.