ಮೈಸೂರು: ‘ಬೇಸಿಗೆ ಶಿಬಿರಗಳು ಮಕ್ಕಳ ಸಮಗ್ರ ಬೆಳವಣಿಗೆಗೆ ಉಪಯುಕ್ತ’ ಎಂದು ಮೈಸೂರು ವಿ.ವಿ ಸಿಂಡಿಕೇಟ್ ಮಾಜಿ ಸದಸ್ಯ ಈ.ಸಿ.ನಿಂಗರಾಜ್ ಗೌಡ ಹೇಳಿದರು.

ನಗರದ ಕಿರುರಂಗಮಂದಿರದಲ್ಲಿ ಅದಮ್ಯ ರಂಗಶಾಲೆ ನೇತೃತ್ವದಲ್ಲಿ ವಿ.ಕೆ.ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ಮಂಗಳವಾರ ನಡೆದ ‘ಬಾಲಂಗೋಚಿ’ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

‘ಮಕ್ಕಳ ಆಟ, ಕಲಿಕೆ ಮತ್ತು ಸಂಸ್ಕಾರಗಳನ್ನು ಒಟ್ಟುಗೂಡಿಸುವ ಚಟುವಟಿಕೆಗಳು ಶಿಬಿರಗಳಲ್ಲಿ ನಡೆಯುವುದರಿಂದ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ಆಗುತ್ತದೆ’ ಎಂದರು.

ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿಯ ಭಾರತೀ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಎಸ್.ಎಲ್.ಸುರೇಶ್, ಪತ್ರಕರ್ತ ಗಿರೀಶ್ ಹುಣಸೂರು, ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ಅಧ್ಯಕ್ಷೆ ಎಚ್.ಎಲ್.ಯಮುನಾ ಹಾಗೂ ಮೈಸೂರಿನ ತೇಗು ಮೆಸ್ ಮಾಲೀಕ ಟಿ.ಶಾಮ್ ಅವರಿಗೆ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ‘ಅದಮ್ಯ ಕಾಯಕಯೋಗಿ ಪ್ರಶಸ್ತಿ’ ಪ್ರದಾನ ಮಾಡಿದರು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಬಸವೇಶ್ವರನಗರ ಎಎಂಬಿ ಸಂಯುಕ್ತ ಪಿಯು ಕಾಲೇಜಿನ ಎಂ.ಸಂಗೀತ, ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಎನ್ಎಸ್ಎಸ್ ಸಂಘಟನಾ ಕಾರ್ಯದರ್ಶಿ ಸಿ.ಆರ್.ಮಾನಸ, ಸ್ವಯಂ ಸೇವಕಿ ಬಿ.ನಿತ್ಯಶ್ರೀ ಅವರಿಗೆ ‘ಅದಮ್ಯ ಯುವಚೇತನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿ.ಕೆ.ಪಬ್ಲಿಕ್ ಶಾಲೆ ಕಾರ್ಯದರ್ಶಿ ರವಿಕುಮಾರ್ ಬೆಕ್ಯಾ ಅಧ್ಯಕ್ಷತೆ ವಹಿಸಿದ್ದರು. ಅದಮ್ಯ ರಂಗಶಾಲೆಯ ಗೌರವ ಕಾರ್ಯದರ್ಶಿ ಟಿ. ಸತೀಶ್ ಜವರೇಗೌಡ ಆಶಯ ಭಾಷಣ ಮಾಡಿದರು.

ಅದಮ್ಯ ರಂಗಶಾಲೆಯ ಕಾರ್ಯದರ್ಶಿ ಚಂದ್ರು ಮಂಡ್ಯ, ಪರಮೇಶ್ ಕೆ.ಉತ್ತನಹಳ್ಳಿ, ಬಸಪ್ಪ ಸಾಲುಂಡಿ, ಬಿ.ಬಸವರಾಜು, ನಾಗೇಶ್ ಇದ್ದರು. ನಂತರ ಬಾಲಂಗೋಚಿ ಚಿಣ್ಣರ ಬೇಸಿಗೆ ಶಿಬಿರದ ಮಕ್ಕಳು ‘ಮಳೆ ಹುಚ್ಚ’, ‘ಗುಬ್ಬಿ ಮತ್ತು ಗೋಪಿ’ ನಾಟಕ ಪ್ರದರ್ಶಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-39-1596969442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.