ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಪ್ರಮಾಣ ಪತ್ರದ ಶುಲ್ಕ ಪಾವತಿಸಲು ಕ್ರಾಫರ್ಡ್ ಸಭಾಂಗಣದ ಬಳಿಯ ಎಸ್ಬಿಐ ಮುಂಭಾಗ ನೂರಾರು ವಿದ್ಯಾರ್ಥಿಗಳು ದಿನವಿಡೀ ಕಾದರು. ಶುಲ್ಕ ಪಾವತಿಗೆ ಹೆಚ್ಚುವರಿ ದಿನ ನೀಡದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿಶ್ವವಿದ್ಯಾಲಯವು ಆನ್ಲೈನ್ ಮೂಲಕ ಘಟಿಕೋತ್ಸವ ಪ್ರಮಾಣಪತ್ರ ನೀಡುತ್ತಿದ್ದು, ಅದಕ್ಕಾಗಿ ₹ 2,840 ನಿಗದಿಗೊಳಿಸಿದೆ. ಶುಲ್ಕ ಪಾವತಿಗೆ ಬುಧವಾರ ಕೊನೆಯ ದಿನವಾದ್ದರಿಂದ ನೂರಾರು ವಿದ್ಯಾರ್ಥಿಗಳು ಬೆಳಿಗ್ಗಿನಿಂದ ಬ್ಯಾಂಕ್ ಮುಂದೆ ಜಮಾಯಿಸಿದ್ದರು. ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಸೇರಿದಂತೆ ವಿವಿಧೆಡೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಬಿಸಿಲಿನ ನಡುವೆಯೂ ಶುಲ್ಕ ಪಾವತಿಗಾಗಿ ಸರತಿ ಸಾಲಿನಲ್ಲಿ ನಿಂತರು.

‘2023, 24 ಮತ್ತು 25ನೇ ಸಾಲಿನ ವಿದ್ಯಾರ್ಥಿಗಳು ಶುಲ್ಕ ಪಾವತಿಗಾಗಿ ಬಂದಿದ್ದಾರೆ. ಆನ್ಲೈನ್ ಮೂಲಕ ಪದವಿ ಪ್ರಮಾಣ ಪತ್ರ ಪಡೆಯಲು ₹ 2,840 ಯಾಕೆ ನೀಡಬೇಕು. ಎರಡೇ ದಿನಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಶುಲ್ಕ ಕಟ್ಟಲು ಹೇಗೆ ಸಾಧ್ಯ. ಎಲ್ಲಾ ವಿದ್ಯಾರ್ಥಿಗಳು ಈ ಬ್ಯಾಂಕ್ನಲ್ಲೇ ಬಂದು ಶುಲ್ಕ ಕಟ್ಟಬೇಕು ಎಂದು ಹೇಳಿದ್ದಾರೆ. ಬೇರೆ, ಬೇರೆ ಶಾಖೆಗಳಲ್ಲೂ ಶುಲ್ಕ ಪಾವತಿಗೆ ಅವಕಾಶ ಮಾಡಿಕೊಡಬೇಕಿತ್ತು’ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-39-1618713168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.