ಮೈಸೂರು: ಇಲ್ಲಿನ ಮಾನಸಗಂಗೋತ್ರಿಯ ಪತ್ರಿಕೋದ್ಯಮ ಮತ್ತು ಸಂವಹನ ಅಧ್ಯಯನ ವಿಭಾಗದ ವಿದ್ಯಾರ್ಥಿಗಳ ತಂಡವು ಈಚೆಗೆ ತುಮಕೂರು ವಿಶ್ವವಿದ್ಯಾಲಯದಲ್ಲಿ ನಡೆದ ‘ಇಂಪ್ರೆಶನ್– 2026’ ಮಾಧ್ಯಮ ಹಬ್ಬದಲ್ಲಿ ಪಾಲ್ಗೊಂಡು, ವಿವಿಧ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿ ಹೊಮ್ಮಿದೆ.

ರಾಜ್ಯದಾದ್ಯಂತ 15 ಕಾಲೇಜುಗಳು ಹಾಗೂ ವಿವಿಧ ವಿಶ್ವವಿದ್ಯಾಲಯಗಳನ್ನು ಪ್ರತಿನಿಧಿಸುವ 300ಕ್ಕೂ ಹೆಚ್ಚು ಪತ್ರಿಕೋದ್ಯಮ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಚರ್ಚಾ ಸ್ಪರ್ಧೆಯಲ್ಲಿ ಬಸವರಾಜ್ ಬಿಂಗಿ ಮತ್ತು ಹಿತೇಶ್ ಪ್ರಥಮ ಸ್ಥಾನ, ರೇಡಿಯೊ ಜಾಕಿ ಸ್ಪರ್ಧೆಯಲ್ಲಿ ರೂಪಾ ದ್ವಿತೀಯ ಸ್ಥಾನ, ಫೋಟೊಗ್ರಫಿ ಸ್ಪರ್ಧೆಯಲ್ಲಿ ಹಿತೇಶ್ ಮತ್ತು ರಕ್ಷಿತಾ ಪ್ರಥಮ ಸ್ಥಾನ, ಕಿರು ಕಥೆ ಮತ್ತು ಪಿ.ಟಿ.ಸಿ ಸ್ಪರ್ಧೆಯಲ್ಲಿ ಇಂಚರಾ, ಮ್ಯಾಡ್ ಆ್ಯಡ್ ಸ್ಪರ್ಧೆಯಲ್ಲಿ ಸ್ಪಂದನಾ, ರಮೇಶ್, ಶಶಿ, ರಾಹುಲ್, ಚರಣ್ ಪ್ರಥಮ ಸ್ಥಾನ ಪಡೆದು ಮೈಸೂರು ವಿಶ್ವವಿದ್ಯಾಲಯವು ಚಾಂಪಿಯನ್ ಆಯಿತು.

ವಿದ್ಯಾರ್ಥಿಗಳೊಂದಿಗೆ ಸಂಯೋಜಕ ಬಿ.ಸಿ.ಸಂಜಯ್, ಸಂಶೋಧಕ ಅಭಿಷೇಕ್ ಪಾಳ್ಯಗಾರ್ ಅವರನ್ನು ವಿಭಾಗದ ಮುಖ್ಯಸ್ಥೆ ಪ್ರೊ.ಎನ್.ಮಮತಾ, ಪ್ರೊ.ಎಂ.ಎಸ್.ಸಪ್ನಾ ಅಭಿನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-39-1825977185

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.