ಮೈಸೂರು: ಕಾಲೇಜು ಮತ್ತು ಉದ್ಯಮ ರಂಗದ ನಡುವಿನ ಬಾಂಧವ್ಯ ಗಟ್ಟಿಗೊಳಿಸುವ ಆಶಯದೊಂದಿಗೆ ವಿದ್ಯಾವಿಕಾಸ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ವಿಕಾಸ ಮಿಲನ-2026’ ಹಳೆಯ ವಿದ್ಯಾರ್ಥಿಗಳ ಸಮಾವೇಶ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಕರಿಬಸಪ್ಪ ಕ್ವಾಡಿಕಿ, ‘ಹಳೆಯ ವಿದ್ಯಾರ್ಥಿಗಳು ಮತ್ತು ಬೋಧಕ ವರ್ಗ ಒಟ್ಟಾಗಿ ಶ್ರಮಿಸಿದರೆ ವಿದ್ಯಾರ್ಥಿಗಳನ್ನು ಜಾಗತಿಕ ಮಟ್ಟದ ವೃತ್ತಿಪರರನ್ನಾಗಿ ರೂಪಿಸಲು ಸಾಧ್ಯ’ ಎಂದರು.

‘ಉದ್ಯಮ ಮತ್ತು ಶೈಕ್ಷಣಿಕ ಕ್ಷೇತ್ರವನ್ನು ಬೆಸೆಯುವಲ್ಲಿ ಬೋಧಕರು ಹಾಗೂ ಹಳೆಯ ವಿದ್ಯಾರ್ಥಿಗಳ ಪಾತ್ರ’ ಎಂಬ ವಿಷಯದ ಕುರಿತು ಗೋಷ್ಠಿ ನಡೆಯಿತು.

ವಿವಿಧ ಮುಂಚೂಣಿ ಕಂಪನಿಗಳಲ್ಲಿ ನೆಲೆಸಿರುವ ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡು, ಕೃತಕ ಬುದ್ಧಿಮತ್ತೆಯ ಮಹತ್ವವನ್ನು ವಿವರಿಸಿದರು. ‘ಎಐ ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ಜವಾಬ್ದಾರಿಯುತವಾಗಿ ಮತ್ತು ಸೃಜನಾತ್ಮಕವಾಗಿ ಬಳಸಿಕೊಳ್ಳಬೇಕು. ತಾಂತ್ರಿಕ ಜ್ಞಾನದ ಜೊತೆಗೆ ಸಂವಹನ ಕಲೆ, ತಂಡವಾಗಿ ಕೆಲಸ ಮಾಡುವ ಸಾಮರ್ಥ್ಯ ಹಾಗೂ ವೃತ್ತಿಪರ ಶಿಸ್ತನ್ನು ಮೈಗೂಡಿಸಿಕೊಳ್ಳುವುದು ಅನಿವಾರ್ಯ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-39-1836005688

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.