ಮೈಸೂರು: ಇಲ್ಲಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನ (ವಿವಿಸಿಇ) ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದಿಂದ ‘ಇನ್ಯುನಿಟಿ’ ಸಹಯೋಗದಲ್ಲಿ ಹಮ್ಮಿಕೊಂಡಿರುವ ‘ಫ್ಯೂಷನ್ X 1.0’– 24 ಗಂಟೆಗಳ ರಾಷ್ಟ್ರಮಟ್ಟದ ಹ್ಯಾಕಥಾನ್ ಶುಕ್ರವಾರ ಆರಂಭಗೊಂಡಿತು.

ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ‘ಸಮಸ್ಯೆಗಳಿಂದ ಸಾಧ್ಯತೆಯತ್ತ’ ಥೀಮ್ನಲ್ಲಿ ನಡೆದ ‘ಹ್ಯಾಕಥಾನ್’ನಲ್ಲಿ ವಿವಿಧ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಉದ್ಯಮ ಕ್ಷೇತ್ರದ ತಜ್ಞರು ಭಾಗವಹಿಸಿದ್ದರು. ನೈಜ ಜೀವನದ ಸವಾಲುಗಳಿಗೆ ಸೃಜನಾತ್ಮಕ ಹಾಗೂ ಪರಿಣಾಮಕಾರಿ ತಾಂತ್ರಿಕ ಪರಿಹಾರಗಳನ್ನು ರೂಪಿಸುವಲ್ಲಿ ತೊಡಗಿದರು.

ಮುಖ್ಯ ಅತಿಥಿಯಾಗಿದ್ದ ಎಲ್ಟಿಎಸ್ ಮೈಸೂರು ಸಂಸ್ಥೆಯ ಹಿರಿಯ ಡೆಲಿವರಿ ಮ್ಯಾನೇಜರ್ ಶ್ರೀನಿವಾಸ ಬಿ.ಎ. ಮಾತನಾಡಿ, ‘ವಿದ್ಯಾರ್ಥಿಗಳು ಸೃಜನಾತ್ಮಕವಾಗಿ ಚಿಂತಿಸಿ ಸಮಾಜಕ್ಕೆ ಪರಿಣಾಮಕಾರಿ ಪರಿಹಾರಗಳನ್ನು ನೀಡಬೇಕು’ ಎಂದರು.

ವಿದ್ಯಾವರ್ಧಕ ಸಂಘದ ಗೌರವಾಧ್ಯಕ್ಷ ಗುಂಡಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ ಹಾಗೂ ಗೌರವ ಖಜಾಂಚಿ ಶ್ರೀಶೈಲ ರಾಮಣ್ಣನವರ, ವಿವಿಸಿಇ ಪ್ರಾಂಶುಪಾಲ ಬಿ. ಸದಾಶಿವಗೌಡ, ಉಪ ಪ್ರಾಂಶುಪಾಲ ಮತ್ತು ಡೀನ್ ಶೋಭಾ ಶಂಕರ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಗೋಪಾಲ ರೆಡ್ಡಿ ಕೆ. ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-39-1239434532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.