ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕ ನಾಗರಾಜಗೆ ರಾಷ್ಟ್ರೀಯ ಪ್ರಶಸ್ತಿ

Last Updated 18 ಆಗಸ್ಟ್ 2021, 19:46 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯ ದೊಡ್ಡಬನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಸಿ.ಎಂ. ನಾಗರಾಜ ಅವರು ಶಿಕ್ಷಕರಿಗೆ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಾರಿ ಈ ಗೌರವಕ್ಕೆ ಪಾತ್ರರಾದ ರಾಜ್ಯದ ಏಕೈಕ ಶಿಕ್ಷಕ ಇವರು.

15 ವರ್ಷದಿಂದ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ದೊಡ್ಡಬನಹಳ್ಳಿ ಶಾಲೆಯಲ್ಲಿ 2018ರಿಂದ ಕೆಲಸ ಮಾಡುತ್ತಿದ್ದಾರೆ. ಪಾಠ ಬೋಧನೆ ಮಾತ್ರವಲ್ಲದೆ, ಸಮುದಾಯ ಅಭಿವೃದ್ಧಿ ಕಾರ್ಯಗಳಲ್ಲಿಯೂ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶಾಲೆಗೆ ಎಲ್‌ಇಡಿ ಟಿವಿ, ಸೌರಫಲಕ, ಸೌರದೀಪಗಳನ್ನು ದೇಣಿಗೆಯಾಗಿ ನೀಡಿ ವಿದ್ಯಾರ್ಥಿಗಳಿಗೆ ಅನುಕೂಲವನ್ನೂ ಕಲ್ಪಿಸಿದ್ದಾರೆ.

ಎರೇಹುಳು ಘಟಕದ ಬಗ್ಗೆ ಅವರು ಮಂಡಿಸಿದ ವಿಷಯವು ರಾಷ್ಟ್ರೀಯ, ಅಂತರರಾಷ್ಟ್ರೀಯ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ಈ ಬಾರಿ ಒಟ್ಟು 44 ಶಿಕ್ಷಕರು ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿದ್ದು, ಶಿಕ್ಷಕರ ದಿನವಾದ ಸೆ.5ರಂದು ನವದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT