ನಾಲತವಾಡ: ಸಮೀಪದ ನಾರಾಯಣಪುರದ ಮಾತೋಶ್ರೀ ನಿಂಬೆಮ್ಮ ಪದವಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ ಹಾಗೂ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಏಳು ದೀನಗಳ ವಾರ್ಷಿಕ ವಿಶೇಷ ಶಿಬಿರವನ್ನು ನಾರಾಯಣಪುರದ ಈಶ್ವರ ದೇವಸ್ಥಾನದಲ್ಲಿ ಜರುಗಿತು.

ಕೊಡೇಕಲ್ ಸರ್ಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ಕಾಶಪ್ಪ ನಾಗರಬೆಟ್ಟ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಸೇವಾ ಮನೋಭಾವ ಹಾಗೂ ವಿನೋಬಾ ಭಾವೆರವರ ಬಡವರ ಕಲ್ಯಾಣದ ಕುರಿತು ಇದ್ದ ನಿಸ್ವಾರ್ಥ ಸೇವೆಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸ್ವಯಂ ಸೇವಕರಿಗೆ ಕರೆ ನೀಡಿದರು.

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ವಿಜಯಕುಮಾರ ಗುತ್ತೇದಾರ ಪ್ರಾಸ್ತಾವಿಕವಾಗಿ ಮಾತನಾಡಿ, ‘ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ವ್ಯಕ್ತಿತ್ವ ವಿಕಾಸವನ್ನು ಬೆಳೆಸುವದಾಗಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಡಾ.ಜಗದೀಶ ನೂಲಿನವರ ಅವರು, ವಾರ್ಷಿಕ ವಿಶೇಷ ಶಿಬಿರವು ಇಂದಿನಿಂದ ಏಳು ದಿನಗಳವರೆಗೆ ಜರುಗಲಿದ್ದು, ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ದಿನಚರಿಯನ್ನು ಪಾಲಿಸುತ್ತ ಸೇವಾ ಕೈಂಕರ್ಯಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಅಂದಾನಪ್ಪ ಚಿನಿವಾಲರ, ಬಸವರಾಜ ಶಾರದಳ್ಳಿ, ಬಾಪೂಜಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಜಕುಮಾರ ವನಹಳ್ಳಿ, ಉಪನ್ಯಾಸಕ ಎಸ್.ಆರ್.ಕಸಬೇಗೌಡರ, ಮಲ್ಲಿಕಾರ್ಜುನ ಲತಿಗೇರ, ಶೇಖರಯ್ಯ ಹಿರೇಮಠ ಮಲ್ಲಿಕಾರ್ಜುನ ಮೇಳಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಾದ ಐಶ್ವರ್ಯ ಗೌಡರ, ಶಿಲ್ಪಾ ಕರಿಬಾವಿ, ವಾಣಿ ನಾಗೂರ ಕಾರ್ಯಕ್ರಮ ನಡೆಸಿಕೊಟ್ಟರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-26-2130747534

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.