ಚನ್ನರಾಯಪಟ್ಟಣ: ‘ಮೈಸೂರು ಸಂಸ್ಥಾನದಲ್ಲಿ ಜನಪರ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಲ್ಲುತ್ತದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಎಚ್.ಸಿದ್ದೇಗೌಡ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದಿಂದ ಪಟ್ಟಣದ ಕರ್ನಾಟಕ ಸಂಘದ ಆವರಣದಲ್ಲಿ ಮಂಗಳವಾರ ನಡೆದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘1915ರ ಮೇ 5ರಂದು ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಿಸುವ ಮೂಲಕ ಕನ್ನಡ ನಾಡು, ನುಡಿ, ಸಾಹಿತ್ಯವನ್ನು ಪೋಷಿಸಲು ಸಹಾಯಕವಾಯಿತು’ ಎಂದು ಹೇಳಿದರು.

‘ವಿದ್ಯಾರ್ಥಿಗಳು ಭವಿಷ್ಯದ ರೂವಾರಿಗಳಾಗಬೇಕು, ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಸಮಾಜದಲ್ಲಿ ಉನ್ನತಿ ಸಾಧಿಸಬೇಕು. ವಿದ್ಯಾರ್ಥಿಗಳ ಯಶಸ್ಸಿನ ಹಿಂದೆ ಪೋಷಕರು ಮತ್ತು ಶಿಕ್ಷಕರು ಬಹು ಮುಖ್ಯ ಪಾತ್ರ ವಹಿಸುತ್ತಾರೆ’ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎನ್. ಲೋಕೇಶ್ ಮಾತನಾಡಿ, ‘ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿಯಲ್ಲಿ ಕನ್ನಡದಲ್ಲಿ 31 ವಿದ್ಯಾರ್ಥಿಗಳು 125 ಅಂಕ ಗಳಿಸಿರುವುದು ಉತ್ತಮ ಬೆಳವಣಿಗೆ. ನಿರಂತರವಾಗಿ ಹೊಸತನ್ನು ಕಲಿಯುವ ತುಡಿತ ವಿದ್ಯಾರ್ಥಿಗಳಲ್ಲಿರಬೇಕು. ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳುವುದರಿಂದ ಸಾಮಾನ್ಯ ಜ್ಞಾನದ ಜತೆ ಮಾತನಾಡುವ, ಬರೆಯುವ ಕೌಶಲ ವೃದ್ಧಿಸುತ್ತದೆ’ ಎಂದು ಹೇಳಿದರು.

ಕಲಾವಿದ ನಂಜುಂಡ ಮೈಮ್ ಮಾತನಾಡಿ, ಸಾಹಿತ್ಯಾಸಕ್ತರು ಮತ್ತು ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಚನ್ನರಾಯಪಟ್ಟಣ ತಾಲ್ಲೂಕು ಕೇಂದ್ರದಲ್ಲಿ ಸಾಹಿತ್ಯ ಭವನ ನಿರ್ಮಿಸಬೇಕು’ ಎಂದರು.

ಮಕ್ಕಳ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ಸಿ.ಎನ್. ಅಶೋಕ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಚ್. ಸತೀಶ್, ಕುವೆಂಪು ವೇದಿಕೆಯ ಅಧ್ಯಕ್ಷ ರಮೇಶ್ ಕುಂಬಾರಹಳ್ಳಿ, ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಸ್. ಆದಿಶೇಷಕುಮಾರ್, ತಾ.ಪಂ. ಕೆಡಿಪಿ ಸದಸ್ಯ ಕೆ.ಟಿ. ಮಹೇಶ್ ಮಾತನಾಡಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಎಚ್.ಆರ್. ವೆಂಕಟೇಶ್, ಸಾಹಿತ್ಯ ಪರಿಷತ್ತು ಪದಾಧಿಕಾರಿಗಳಾದ ಶಿವನಗೌಡಪಾಟೀಲ, ಜಬಿವುಲ್ಲಾ ಬೇಗ್, ಎಸ್.ಪಿ. ದಯಾನಂದ್, ಪ್ರಕಾಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-36-475253452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.