ನಾಪೋಕ್ಲು: ಮಗುವಿಗೆ ಸಮಾಜದಲ್ಲಿ ಗೌರವಸ್ಥಾನ ಸಿಗುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾದುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಹೇಳಿದರು.

ಇಲ್ಲಿನ ಗುರು ಪೊನ್ನಪ್ಪ ಸಭಾಂಗಣದಲ್ಲಿ ಆಯೋಜಿಸಿದ ಹಳೆತಾಲೂಕು ಅಂಗನವಾಡಿ ಕೇಂದ್ರದ ವಾರ್ಷಿಕೋತ್ಸವದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ‘ಮಗು ತಂದೆ–ತಾಯಿಯನ್ನು ಹೇಗೆ ಗೌರವಿಸಬೇಕು, ತಾಯಿ-ಮಕ್ಕಳ ಬಾಂಧವ್ಯ ಹೇಗಿರಬೇಕು ಎಂಬುದಕ್ಕೆ ಹಳೆತಾಲೂಕು ಅಂಗನವಾಡಿ ಕೇಂದ್ರ ಸಾಕ್ಷಿಯಾಗಿದೆ’ ಎಂದು ಪ್ರಶಂಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳದಾನಿ ಕುಲ್ಲೇಟಿರ ಅರುಣ್ ಬೇಬ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ. ನಾಣಯ್ಯ, ಕುಲ್ಲೇಟಿರ ಹೇಮಾ ಅರುಣ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪ ಡಂಡ ಸವಿತಾ ಕೀರ್ತನ್, ನಿವೃತ್ತ ಪ್ರೊ. ಕಲ್ಯಾಟಂಡ ಪೂಣಚ್ಚ ಸಭೆಯಲ್ಲಿ ಹಾಜರಿದ್ದರು. ನಿವೃತ್ತ ಪಿಡಿಒ ಚೊಂದಕ್ಕಿ, ನಿವೃತ್ತ ಶಿಕ್ಷಕಿ ಮುಂಡಂಡ ಕವಿತಾ, ನಿವೃತ್ತ ಶಿಕ್ಷಕಿ ಬೋಪಂಡ ಬೊಳ್ಳಮ್ಮ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶೀಲಾ ಅಶೋಕ್ ಉಪಸ್ಥಿತರಿದ್ದರು.

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ಹಾಗೂ ಮೇಪ ಡಂಡ ಸವಿತಾ ಕೀರ್ತನ್, ಶಿಕ್ಷಕಿಯರಾದ ಸುಜಾತಾ, ಸಫ್ರೀನಾ,ಮಮತಾ ಅವರನ್ನು ಹಾಗೂ ಇಲಾಖೆಯ ವತಿಯಿಂದ ಅಂಗನವಾಡಿ ಶಿಕ್ಷಕಿ ಭಾಗ್ಯವತಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಸಿ.ಎಚ್.ಒ ಛಾಯಾ, ಕಲ್ಯಾಟಂಡ ಚೈತ್ರ ಹಾಗೂ ಚೋಂದಕ್ಕಿ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ ಅಂಗನವಾಡಿ ವಿದ್ಯಾರ್ಥಿಗಳಿಗೆ ಅರ್ಹತಾ ಪತ್ರವನ್ನು ವಿತರಿಸಿ ಅಭಿನಂದಿಸಿದರು. ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಬಹುಮಾನ ವಿತರಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-51-1732097609

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.