ನಾಪೋಕ್ಲು: ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಕತ್ತೂರು ಗ್ರಾ.ಪಂ. ಮಟ್ಟದ ಸಂಜೀವಿನಿ ಒಕ್ಕೂಟದ ಆಹಾರ, ಪೋಷಣೆ, ಆರೋಗ್ಯ, ನೀರು ಮತ್ತು ನೈರ್ಮಲ್ಯ ಹಾಗೂ ಕ್ಷಯರೋಗ ನಿರ್ಮೂಲನ ಮಾಹಿತಿ ಕಾರ್ಯಾಗಾರ ನಡೆಯಿತು.

ಮಡಿಕೇರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ನಿರ್ಮಲ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲೆಯ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಟಿ.ಬಿ., ಎನ್ಎಸ್ಎಸ್ ಘಟಕದ ಶಿಬಿರಾಧಿಕಾರಿ ವೇಣುಗೋಪಾಲ್, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಶಿಲ್ಪಾ, ಆಶಾ ಕಾರ್ಯಕರ್ತೆಯರಾದ ಸುನಿತಾ ಮತ್ತು ಯಶೋಧಾ ಇದ್ದರು. ವಿದ್ಯಾರ್ಥಿಗಳಿಗೆ ಆಹಾರದ ಅಗತ್ಯತೆ, ಪೋಷಕಾಂಶಗಳ ಸೇವನೆ, ಶುದ್ಧ ನೀರಿನ ಬಳಕೆ, ಕ್ಷಯ ರೋಗ ನಿರ್ಮೂಲನೆ ಮಾಹಿತಿ ನೀಡಲಾಯಿತು. ಮಡಿಕೇರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೇಸಿಗೆ ಶಿಬಿರದ ವಿದ್ಯಾರ್ಥಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-51-1138597960

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.