ನರಸಿಂಹರಾಜಪುರ: ‘ಪುಸ್ತಕಗಳ ಓದಿನಿಂದ ಮಾತ್ರ ಬೌದ್ಧಿಕ ಶಕ್ತಿ ಬೆಳವಣಿಗೆ ಸಾಧ್ಯ’ ಎಂದು ಶಿವಮೊಗ್ಗ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್. ವರದರಾಜ್ ಅಭಿಪ್ರಾಯಪಟ್ಟರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಿಂದ ಗುರುವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಪುಸ್ತಕ ಮತ್ತು ಕೃತಿ ಸ್ವಾಮ್ಯ ದಿನಾಚರಣೆ ಹಾಗೂ ಪುಸ್ತಕ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಮೂಲಕ ಬೌದ್ಧಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕು. ವಿಶ್ವವನ್ನು ಅರಿಯಲು ಕೋಶ ಓದಬೇಕು ಅಥವಾ ದೇಶ ಸುತ್ತಬೇಕು. ಓದುವುದು ಬರೆಯುವುದು ಒಂದೇ ನಾಣ್ಯದ ಎರಡು ಮುಖಗಳು’ ಎಂದರು.

ಗ್ರಂಥಾಲಯ ವಿಭಾಗದ ಮುಖ್ಯಸ್ಥ ಎಂ.ಎಚ್. ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ಯುನೆಸ್ಕೊ ನಿರ್ದೇಶನ ದಂತೆ 1995ರಿಂದ ವಿಶ್ವದಾದ್ಯಂತ ಏಪ್ರಿಲ್ 23ನ್ನು ವಿಶ್ವಪುಸ್ತಕ ದಿನವನ್ನಾಗಿ ಆಚರಿಸಲಾಗುತ್ತಿದೆ. ಓದುವ ಸಂಸ್ಕೃತಿ ಬೆಳೆಸುವುದು ಇದರ ಉದ್ದೇಶ. ಡಿಜಿಟಲ್ ಯುಗದಲ್ಲಿ ಓದುವುದು ಕಡಿಮೆಯಾಗುತ್ತಿದೆ. ಪುಸ್ತಕಗಳನ್ನು ಆಳವಾಗಿ ಅಧ್ಯಯನ ಮಾಡಿದರೆ ಜ್ಞಾನವಂತರಾಗಬಹುದು. ಕಾಲೇಜಿನ ಗ್ರಂಥಾಲಯದಲ್ಲಿ ₹9 ಲಕ್ಷ ಅನುದಾನದಲ್ಲಿ ಎಲ್ಲಾ ರೀತಿಯ ಪರಾಮರ್ಶನ ಗ್ರಂಥಗಳು, ಪರೀಕ್ಷೆಗೆ ಉಪಯೋಗವಾಗುವ ಪುಸ್ತಕಗಳನ್ನು ತರಿಸಲಾಗಿದೆ. ಸಂಪೂರ್ಣ ಗಣಕೀಕರಣ ಮಾಡಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಕನ್ನಡ ವಿಭಾಗದ ಮುಖ್ಯಸ್ಥೆ ಜಿ. ಸವಿತಾ ಮಾತನಾಡಿ, ‘ಪುಸ್ತಕ ಓದು ವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಜ್ಞಾನ, ಸಂಸ್ಕೃತಿ, ಸಂಸ್ಕಾರ, ಭಾಷಾ ಸಂಪತ್ತು ಬೆಳೆಯಲು ಸಹಾಯಕವಾಗುತ್ತದೆ’ ಎಂದರು.

ಪ್ರಾಂಶುಪಾಲ ಧನಂಜಯ ಅಧ್ಯಕ್ಷತೆ ವಹಿಸಿದ್ದರು. ಐಕ್ಯುಎಸಿ ಸಂಚಾಲಕ ಆರ್.ಕೆ. ಪ್ರಸಾದ್, ವಾಣಿಜ್ಯ ವಿಭಾಗದ ಮುಖ್ಯಸ್ಥ ಎಸ್.ಡಿ. ಸತೀಶ್, ನಿರ್ವಹಣಾ ವಿಭಾಗದ ಮುಖ್ಯಸ್ಥ ವಿ. ಸತೀಶ್, ಕನ್ನಡ ವಿಭಾಗದ ಶಂಕರನಾಯ್ಕ, ಸ್ವಪ್ನ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-126-488568567

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.