ನರಸಿಂಹರಾಜಪುರ: ‘1944ರ ಏ. 14ರಂದು ಮುಂಬೈ ವಿಕ್ಟೋರಿಯಾ ಬಂದರಿನಲ್ಲಿ ಸ್ಟೈಕಿನ್ ಎಂಬ ಹಡಗಿನಲ್ಲಿ ಸ್ಫೋಟಕ ಸಾಮಾಗ್ರಿ ಸಾಗಿಸುತ್ತಿದ್ದಾಗ ಬೆಂಕಿ ತಗಲಿತ್ತು. ಆ ಬೆಂಕಿ ನಂದಿಸಲು ತೆರಳಿದ್ದ ಅಗ್ನಿಶಾಮಕ ಅಧಿಕಾರಿ ಹಾಗೂ 67 ಸಿಬ್ಬಂದಿ ಮೃತಪಟ್ಟಿದ್ದರು. ಅವರ ಸ್ಮರಣಾರ್ಥ ಪ್ರತಿವರ್ಷ ರಾಷ್ಟ್ರದಾದ್ಯಂತ ಅಗ್ನಿಶಾಮಕ ಸೇವಾ ಸಪ್ತಾಹ ಆಚರಿಸಲಾಗುತ್ತಿದೆ’ ಎಂದು ಅಗ್ನಿಶಾಮಕ ದಳದ ಠಾಣಾಧಿಕಾರಿ ದೇವೇಂದ್ರನಾಯಕ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದ ಸಮೀಪವಿರುವ ಅಗ್ನಿಶಾಮಕ ಠಾಣಾ ಕಚೇರಿಯಲ್ಲಿ, ಮಂಗಳವಾರ ಅಗ್ನಿಶಾಮಕ ಸೇವಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಗ್ನಿಶಾಮಕ ಸೇವಾ ಸಪ್ತಾಹದಲ್ಲಿ ಶಾಲಾ–ಕಾಲೇಜು, ಸಂಘ–ಸಂಸ್ಥೆಗಳು, ಪೆಟ್ರೋಲ್ ಬಂಕ್, ಆಸ್ಪತ್ರೆ, ಗ್ರಾಮಗಳಿಗೆ ತೆರಳಿ ಅಗ್ನಿ ಆಕಸ್ಮಿಕದ ಬಗ್ಗೆ ಅರಿವು ಮೂಡಿಸಲಾಗುವುದು. ಕರಪತ್ರ ಹಂಚಿ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ನಡೆಸಿ ಜಾಗೃತಿ ಮೂಡಿಸಲಾಗುವುದು ಎಂದರು.

ಅಗ್ನಿಶಾಮಕ ಪ್ರಮುಖರಾದ ಡಿ.ಕೆ. ಸಂತೋಷ್ ಕುಮಾರ್, ಪಿ.ರಮೇಶ್, ಅಗ್ನಿಶಾಮಕ ಚಾಲಕ ಪ್ರವೀಣ್ ಮತ್ತು ಸಿಬ್ಬಂದಿ ಇದ್ದರು.

1944ರಲ್ಲಿ ಮೃತಪಟ್ಟಿದ್ದ 67 ಸಿಬ್ಬಂದಿಯ ಆತ್ಮಕ್ಕೆ ಶಾಂತಿ ಕೋರಿ 2 ನಿಮಿಷ ಮೌನಾಚರಣೆ ನಡೆಸಲಾಯಿತು. ನಂತರ ಬಿ.ಎಚ್. ಕೈಮರ, ಶಾಂತಿ ಭವನಕ್ಕೆ ತೆರಳಿ ಸಾರ್ವಜನಿಕರಿಗೆ ಕರಪತ್ರ ವಿತರಿಸಲಾಯಿತು.

ಬುಧವಾರ ಶೆಟ್ಟಿಕೊಪ್ಪದ ಗ್ರಂಥಾಲಯದಲ್ಲಿ ನಡೆಯುತ್ತಿದ್ದ ಮಕ್ಕಳ ಬೇಸಿಗೆ ಶಿಬಿರದಲ್ಲಿ ಪ್ರಮುಖ ಅಗ್ನಿಶಾಮಕ ಡಿ.ಕೆ. ಸಂತೋಷ್ ಕುಮಾರ್, ಮಕ್ಕಳಿಗೆ ಅಗ್ನಿ ಆಕಸ್ಮಿಕ ಉಂಟಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-126-1032237946

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.