ನರಸಿಂಹರಾಜಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025–26ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್ ಹಾಗೂ ವಿವಿಧ ವೇದಿಕೆಗಳ ಸಮಾರೋಪ ಸಮಾರಂಭ ಮೇ 4ರಂದು ನಡೆಯಲಿದೆ.

ಶಾಸಕ ಟಿ.ಡಿ.ರಾಜೇಗೌಡ ಉದ್ಘಾಟಿಸಲಿದ್ದು, ಪ್ರಾಂಶುಪಾಲ ಧನಂಜಯ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ, ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಹೊಳೆಹೊನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಚ್.ರುದ್ರಮುನಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಕಾಲೇಜಿಗೆ ₹20 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಾಂಕ್ರೀಟ್ ರಸ್ತೆ, ₹27.9 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಬಾಕ್ಸ್ ಚರಂಡಿ, ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಬಸ್ ನಿಲ್ದಾಣದ ಉದ್ಘಾಟನೆ ಹಾಗೂ ₹15 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿದ್ಯಾರ್ಥಿಗಳಿಗೆ ನೂತನ ಶೌಚಾಲಯದ ಶಂಕುಸ್ಥಾಪನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-126-1593582395

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.