ನರಸಿಂಹರಾಜಪುರ: ಮಕ್ಕಳಿಗೆ ಪಠ್ಯ ಶಿಕ್ಷಣದ ಜತೆಗೆ ಜೀವನ ಮೌಲ್ಯಗಳನ್ನು ಕಲಿಸಲಾಗುತ್ತಿದೆ ಎಂದು ಜೀವನ್ ಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಉಪಾಧ್ಯಕ್ಷ ಫಾ. ಬೆನ್ನಿಮ್ಯಾಥ್ಯೂ ಹೇಳಿದರು.

ಪಟ್ಟಣದ ಜೀವನ್ ಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಗುರುವಾರ ನಡೆದ ಕಲಾ ಸಂಭ್ರಮ 2025– 26ನೇ ಸಾಲಿನ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಾಲೆ 17 ವರ್ಷಗಳಿಂದ ಸತತವಾಗಿ ಎಸ್.ಎಸ್.ಎಲ್.ಸಿಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆಯುತ್ತಿದೆ. ಹಿರಿಯರು ಶ್ರಮವಹಿಸಿ ಹಲವು ವರ್ಷಗಳ ಹಿಂದೆ ಸ್ಥಾಪಿಸಿದ ಶಾಲೆ, ಪ್ರಸ್ತುತ ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರ ಸಹಕಾರದಿಂದ ಅಭಿವೃದ್ಧಿ ಪಥದತ್ತ ಸಾಗಿದೆ’ ಎಂದು ಶ್ಲಾಘಿಸಿದರು.

ಮಾಜಿ ಕಾರ್ಯದರ್ಶಿ ಕೆ.ಟಿ. ಎಲ್ದೊ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೀವನ್ ಜ್ಯೋತಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಪೀಟರ್ ಬಾಬು, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ರಿತಿನ್ ರಾಜ್ ಪೌಲ್ ಮಾತನಾಡಿದರು.

ಪೋಷಕ ಪಾಲಕರ ಸಂಘದ ಅಧ್ಯಕ್ಷ ಜೆ.ಜೋಫಿ, ಕಾರ್ಯದರ್ಶಿ ಮೇರಿಕುರಿಯಚ್ಚನ್, ಶಾಲಾ ಆಡಳಿತ ಮಂಡಳಿಯ ಖಜಾಂಚಿ ಪಿ.ಪಿ. ಎಲ್ದೊ, ಸದಸ್ಯರಾದ ಕೆ.ಪಿ. ಬೆನ್ನಿ, ಕಮಲ್ ಜೇಕಬ್, ಎಂ.ಎಂ. ಬೇಸಿಲ್, ಎ.ಪಿ. ರಾಜೇಶ್, ಎಂ.ಪಿ. ಪೌಲೋಸ್, ಕೆ.ವಿ. ಸಾಜು ಇದ್ದರು. ಯೋಧ ಮಿಲ್ಟನ್ ವರ್ಗೀಸ್ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-126-1631200779

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.